newsics.com
ಮ್ಯೂನಿಕ್, ಜರ್ಮನಿ: ಖ್ಯಾತ ಕ್ರಿಕೆಟ್ ಆಟಗಾರ ಕೆ ಎಲ್ ರಾಹುಲ್ ಜರ್ಮನಿಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಇದೀಗ ಚೇತರಿಸಿಕೊಳ್ಳುತ್ತಿದ್ದೇನೆ ಎಂದು ಕೆ ಎಲ್ ರಾಹುಲ್ ತಿಳಿಸಿದ್ದಾರೆ.
ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದ ಬಳಿಕ ಕೆ ಎಲ್ ರಾಹುಲ್ ಜರ್ಮನಿೆಗೆ ತೆರಳಿದ್ದರು.
ತಮ್ಮ ಚೇತರಿಕೆಗಾಗಿ ಶುಭ ಹಾರೈಸಿದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸುವುದಾಗಿ ರಾಹುಲ್ ತಿಳಿಸಿದ್ದಾರೆ. ಗಾಯದ ಕಾರಣದಿಂದ ಕೆ ಎಲ್ ರಾಹುಲ್ ದಕ್ಷಿಣ ಆಫ್ರಿಕಾ ವಿರುದ್ದದ ಟಿ- 20 ಪಂದ್ಯ ಮತ್ತು ಇಂಗ್ಲೆಂಡ್ ವಿರುದ್ದದ ಟೆಸ್ಟ್ ಪಂದ್ಯದಿಂದ ವಂಚಿತರಾಗಿದ್ದರು.