Sunday, July 3, 2022

ಕೊರೋನಾ; ಭಾರತದ ವಿಮಾನಗಳಿಗೆ ನಿಷೇಧ ಹೇರಿದ ಕುವೈತ್

Follow Us

ಕುವೈತ್: ಕೊರೋನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಕುವೈತ್ ಸರ್ಕಾರ ಭಾರತದ ವಿಮಾನಗಳಿಗೆ ನಿಷೇಧ ಹೇರಿದೆ.
ಕೊರೋನಾ ಸೋಂಕು ಹರಡದಂತೆ ಅಗತ್ಯ ಕ್ರಮಗಳನ್ನು ಕೈಗೊಂಡಿರುವ ಕುವೈತ್ ಸರ್ಕಾರ, ಶನಿವಾರದಿಂದ ಮತ್ತೆ ವಿಮಾನಯಾನ ಆರಂಭಿಸಿದೆ. ಆದರೆ ಭಾರತ ಸೇರಿದಂತೆ 31 ದೇಶಗಳ ಪ್ರಯಾಣಿಕರು ಕುವೈತ್ ಪ್ರವೇಶಿಸುವಂತಿಲ್ಲ, ಆ ದೇಶಗಳಿಂದ ವಾಣಿಜ್ಯ ವಿಮಾನ ಇಲ್ಲಿ ಲ್ಯಾಂಡ್ ಆಗುವಂತಿಲ್ಲ ಎಂದು ಕಠಿಣ ಆದೇಶ ಹೊರಡಿಸಲಾಗಿದೆ.
ನಿರ್ಬಂಧಿತ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ, ಇರಾನ್, ಚೀನಾ, ಬ್ರೆಜಿಲ್, ಲೆಬನಾನ್, ಸ್ಪೇನ್, ಸಿಂಗಪುರ, ಈಜಿಪ್ಟ್ ಹಾಗೂ ಶ್ರೀಲಂಕಾ ಸೇರಿವೆ ಎಂದು ಕುವೈತ್ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪ್ರಕಟಣೆ ಹೊರಡಿಸಿದೆ.
ಕೊರೋನಾ ಹಿನ್ನೆಲೆಯಲ್ಲಿ ಕಳೆದ ಐದು ತಿಂಗಳಿನಿಂದ ವಾಣಿಜ್ಯ ಉದ್ದೇಶಿತ ವಿಮಾನಯಾನ ಸ್ಥಗಿತಗೊಳಿಸಲಾಗಿತ್ತು. ಕುವೈತ್ ನಲ್ಲಿ 67,911 ಕೊರೊನಾ ಸೋಂಕಿತ ಪ್ರಕರಣಗಳಿದ್ದು, 457 ಮಂದಿ ಮೃತಪಟ್ಟಿದ್ದಾರೆ. 129 ಮಂದಿ ವಿಷಮ ಪರಿಸ್ಥಿತಿಯಲ್ಲಿದ್ದಾರೆ. 59,213 ಮಂದಿ ಚೇತರಿಸಿಕೊಂಡಿದ್ದಾರೆ. 8,241 ಸಕ್ರಿಯ ಪ್ರಕರಣಗಳಿವೆ.

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!