ಭೂಕುಸಿತ: ಕನಿಷ್ಠ 50 ಮಂದಿ ಸಾವು, ಹಲವರು ನಾಪತ್ತೆ

NEWSICS.COM ಗ್ವಾಟೆಮಾಲಾ: ಮಧ್ಯ ಅಮೆರಿಕದಲ್ಲಿ ಎಟಾ ಚಂಡಮಾರುತದ ಪರಿಣಾಮ ಭಾರೀ ಮಳೆ ಸುರಿಯುತ್ತಿದೆ. ಇದರಿಂದಾಗಿ ಗ್ವಾಟೆಮಾಲಾದಲ್ಲಿ ಭೂಕುಸಿತದಿಂದ 50 ಮಂದಿ ಸಾವನ್ನಪ್ಪಿದ್ದು ಹಲವರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ.ಇನ್ನೂ ವಿವಿಧ ಪ್ರದೇಶಗಳಲ್ಲಿ ಭೂಕುಸಿತ ಉಂಟಾಗಿದ್ದು,‌ಮಧ್ಯ ಅಮೆರಿಕದಲ್ಲಿ ಮಳೆಯಿಂದಾಗಿ 23 ಜನ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮಧ್ಯ ಗ್ವಾಟೆಮಾಲಾದಲ್ಲಿ ಗುಡ್ಡ ಕುಸಿತದಿಂದ 25 ಮನೆಗಳು ನೆಲಸಮವಾಗಿದ್ದು, ಹಲವಾರು ಮಂದಿ ಅವಶೇಷದಡಿ ಸಿಲುಕಿದ್ದಾರೆ ಎಂದು ಅಧ್ಯಕ್ಷ ಅಲ್‌ಜಂಡ್ರೊ ಗಿಯಾಮಟೈ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ನೇಪಾಳ ಪ್ರಧಾನಿ ಭೇಟಿ ಮಾಡಿದ ಭೂ ಸೇನಾ ಮುಖ್ಯಸ್ಥ