Monday, April 12, 2021

ಬ್ರಿಟನ್ ನಲ್ಲಿ ಜೂನ್ ಒಂದರ ತನಕ ಲಾಕ್ ಡೌನ್ ಜಾರಿ

ಲಂಡನ್: ಮಾರಕ ಕೊರೋನಾದಿಂದ ತತ್ತರಿಸಿರುವ ಬ್ರಿಟನ್ ನಲ್ಲಿ ಜೂನ್ ಒಂದರ ತನಕ ಲಾಕ್ ಡೌನ್ ವಿಸ್ತರಿಸಲಾಗಿದೆ. ಇದೇ ವೇಳೆ ಲಾಕ್ ಡೌನ್ ನಿಯಮಗಳಲ್ಲಿ ಭಾರಿ ಸಡಿಲಿಕೆ ಕೂಡ ಮಾಡಲಾಗಿದೆ.  ಬ್ರಿಟನ್ ಪ್ರಧಾನಿ ಬೋರಿಸ್ ಜೋನ್ಸ್ ನ್ ಸರ್ಕಾರದ ಮುಂದಿನ ಕ್ರಮಗಳ ಕುರಿತು ಜನರಿಗೆ ಮಾಹಿತಿ ನೀಡಿದ್ದಾರೆ. ಮನೆಯಲ್ಲಿ ಇರು ಎಂಬುದರ ಬದಲಿಗೆ ಜಾಗೃತರಾಗೋಣ ಎಂಬ ಕಾರ್ಯತಂತ್ರದೊಂದಿಗೆ ಕೊರೋನಾ ಎದುರಿಸಲು ಸಜ್ಜಾಗುವಂತೆ ಅವರು ಮನವಿ ಮಾಡಿದ್ದಾರೆ. ಜೂನ್ ಒಂದರ ತನಕ ಲಾಕ್ ಡೌನ್ ಮುಂದುವರಿಯಲಿದೆ ಎಂದು ಅವರು ತಿಳಿಸಿದ್ದಾರೆ. ಆದರೆ ಜುಲೈ 1ರ ಮೊದಲು ಚಿತ್ರಮಂದಿರ, ಸಾರ್ವಜನಿಕ ಮನೋರಂಜನಾ ಕೇಂದ್ರಗಳನ್ನು ತೆರೆಯುವ ಸಾಧ್ಯತೆ ಇಲ್ಲ ಎಂದು ಬ್ರಿಟನ್ ಪ್ರಧಾನಿ ಸ್ಪಷ್ಟಪಡಿಸಿದ್ದಾರೆ. ಕೊರೋನಾ ಬ್ರಿಟನ್ ನಲ್ಲಿ 32000ಕ್ಕೂ ಹೆಚ್ಚು ಮಂದಿಯನ್ನು ಬಲಿ ಪಡೆದುಕೊಂಡಿದೆ.  ಇನ್ನೊಂದೆಡೆ ಕೊರೋನಾ ಎದುರಿಸಲು ಟರ್ಕಿಯಲ್ಲಿ ಜನರು ಸುಗಂಧ ದ್ರವ್ಯಗಳ ಮೊರೆ ಹೋಗಿದ್ದಾರೆ. ಸುಗಂಧ ದ್ರವ್ಯಗಳು ಕೊರೋನಾ ತಡೆಗೆ ಸಹಕಾರಿ ಎಂಬುದು ಟರ್ಕಿಗಳ ನಂಬಿಕೆಯಾಗಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!