Saturday, April 17, 2021

ಲಾಕ್ ಡೌನ್ ನಿಯಮ ಉಲ್ಲಂಘನೆ: ಸಿಂಗಾಪುರದಿಂದ 10 ಭಾರತೀಯರ ಗಡೀಪಾರು

ಸಿಂಗಾಪುರ: ಮಾರಕ ಕೊರೋನಾ ನಿಯಂತ್ರಿಸಲು ಹೇರಲಾಗಿದ್ದ ಲಾಕ್ ಡೌನ್ ನಿಯಮಗಳನ್ನು ಸತತವಾಗಿ ಉಲ್ಲಂಘಿಸಿದ್ದಕ್ಕಾಗಿ 10 ಮಂದಿ ಭಾರತೀಯರನ್ನು ಸಿಂಗಾಪುರ ಗಡೀಪಾರು ಮಾಡಿದೆ. ಈ ಮೊದಲು ಕಾನೂನು ಉಲ್ಲಂಘನೆಗಾಗಿ ಇವರ ಮೇಲೆ ದಂಡ ವಿಧಿಸಲಾಗಿತ್ತು. ಬಳಿಕ ಆರೋಪಿಗಳು ದುರುದ್ದೇಶಪೂರ್ವಕವಾಗಿ ಕಾನೂನು ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಕ್ಷಣ ಎಲ್ಲ ಆರೋಪಿಗಳನ್ನು ಗಡೀಪಾರು ಮಾಡಲು ಆದೇಶ ನೀಡಲಾಗಿದೆ ಎಂದು ಸಿಂಗಾಪುರ ಅಧಿಕಾರಿಗಳು ಹೇಳಿದ್ದಾರೆ.

ಇನ್ನೊಂದೆಡೆ ಕೊರೋನಾ  ಪೀಡಿತ ಬ್ರಿಟನ್ ನಲ್ಲಿ ಜನ ಜೀವನ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ. ನಾಲ್ಕು ತಿಂಗಳ ಬಳಿಕ ಬ್ಯೂಟಿ ಪಾರ್ಲರ್ ಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಧ್ರೆ಼ಡಿಂಗ್ ಸೇರಿದಂತೆ  ಹಲವು ಸೇವೆಗಳ ಮೇಲೆ ನಿರ್ಬಂಧ ವಿಧಿಸಲಾಗಿದೆ.

ಅಮೆರಿಕದ ನ್ಯೂಯಾರ್ಕ್ ನಗರದಲ್ಲಿ ಪರಿಸ್ಥಿತಿ ಸುಧಾರಿಸುತ್ತಿದೆ. ಸೋಮವಾರ ಕೊರೋನಾದಿಂದ ಇಲ್ಲಿ ಯಾರೂ ಮೃತಪಟ್ಟಿಲ್ಲ. ಎಪ್ರಿಲ್ ತಿಂಗಳಲ್ಲಿ ಪ್ರತಿದಿನ ನಾಲ್ಕು ಸಾವಿರ ಮಂದಿ ಇಲ್ಲಿ ಕೊರೋನಾಕ್ಕೆ ಬಲಿಯಾಗಿದ್ದರು.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!