Saturday, April 17, 2021

ಲಾಕ್‌ಡೌನ್ ತಜ್ಞ ಜೀನ್ ಕ್ಯಾಸ್ಟೆಕ್ಸ್, ಫ್ರಾನ್ಸ್’ನ ಹೊಸ ಪ್ರಧಾನಿ

ಪ್ಯಾರೀಸ್: ಲಾಕ್‌ಡೌನ್ ತಜ್ಞ ಜೀನ್ ಕ್ಯಾಸ್ಟೆಕ್ಸ್ ಅವರನ್ನು ಫ್ರಾನ್ಸ್’ನ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.
ಕೊರೋನಾ ಲಾಕ್‌ಡೌನ್‌ನಿಂದ ಫ್ರಾನ್ಸ್‌ನ ಆರ್ಥಿಕ ಕುಸಿತವನ್ನು ನಿಭಾಯಿಸಲು ಏಪ್ರಿಲ್‌ನಲ್ಲಿ ಮ್ಯಾಕ್ರೊನ್ ಎಡ್ವರ್ಡ್ ಫಿಲಿಫ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಕ್ಯಾಸ್ಟೆಕ್ಸ್ ನೇಮಕಗೊಂಡಿದ್ದಾರೆ.
ಅಷ್ಟೇ ಅಲ್ಲ, 2022 ರ ಚುನಾವಣೆಗೆ ಮುಂಚಿತವಾಗಿ ತಮ್ಮ ಅಧ್ಯಕ್ಷ ಸ್ಥಾನವನ್ನು ಗಟ್ಟಿಗೊಳಿಸಿಕೊಳ್ಳುವ ಆಕಾಂಕ್ಷೆಯಿಂದಲೂ ಫ್ರಾನ್ಸ್‌ನ ಅಧ್ಯಕ್ಷ ಮ್ಯಾಕ್ರೊನ್, ಕ್ಯಾಸ್ಟೆಕ್ಸ್ ಅವರನ್ನು ಫ್ರಾನ್ಸ್’ನ ನೂತನ ಪ್ರಧಾನಿಯನ್ನಾಗಿಸಿದ್ದಾರೆ ಎಂದು ವ್ಯಾಖ್ಯಾನಿಸಲಾಗಿದೆ.
ಶುಕ್ರವಾರ ಸಂಜೆ ಹೋಟೆಲ್ ಡಿ ಮ್ಯಾಟಿಗ್ನಾನ್‌ನಲ್ಲಿರುವ ಪ್ರಧಾನ ಮಂತ್ರಿಯವರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಫಿಲಿಫ್ ಕ್ಯಾಸ್ಟೆಕ್ಸ್ ಅವರಿಗೆ ಪ್ರಧಾನಿ ಸ್ಥಾನವನ್ನು ವರ್ಗಾಯಿಸಿದ್ದಾರೆ. ಈ ವೇಳೆ ಮಾತನಾಡಿದ ನೂತನ ಪ್ರಧಾನಿ ಕ್ಯಾಸ್ಟೆಕ್ಸ್ “ಕೊರೋನಾ ಹಾವಳಿ ನಿಂತಿಲ್ಲ. ಇದರಿಂದ ಉಂಟಾದ ಆರ್ಥಿಕ ಮತ್ತು ಸಾಮಾಜಿಕ ಬಿಕ್ಕಟ್ಟು ಸಾಕಷ್ಟು ಜಟಿಲವಾಗಿದೆ” ಎಂದರು.
ಮೂರು ವರ್ಷಗಳಿಂಡ ಫ್ರಾನ್ಸ್ ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದ್ದು ಇದಕ್ಕಾಗಿಯೇ ಪ್ರಧಾನಿ ಸ್ಥಾನದಲ್ಲಿ ಬದಲಾವಣೆ ತರಲಾಗಿದೆ. ಅಧ್ಯಕ್ಷ ಮ್ಯಾಕ್ರೊನ್ ಆಡಳಿತ ಸುಧಾರಣೆ ಮಾಡಲು ಮುಂದಾಗಿದ್ದು ನೂತನ ಪ್ರಧಾನಿ ಶೀಘ್ರವೇ ಸಂಪುಟ ರಚನೆ ಮಾಡಲಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!