Tuesday, May 24, 2022

ಉಕ್ರೇನ್ ಸೇನಾ ವಿಮಾನ ಪತನ; 22 ಮಂದಿ ಸಾವು

Follow Us

newsics.com
ಕೀವ್ : ಪೂರ್ವಪ್ರಾಂತ್ಯದ ಖರ್ಕೀವ್ ಬಳಿ ಉಕ್ರೇನ್ ವಾಯುಪಡೆಗೆ ಸೇರಿದ ವಿಮಾನ ಪತನಗೊಂಡಿದೆ.
ಈ ದುರಂತದಲ್ಲಿ ಮಿಲಿಟರಿ ಸಿಬ್ಬಂದಿ ಸೇರಿ ಕನಿಷ್ಠ 22 ಮಂದಿ ಸಾವನ್ನಪ್ಪಿದ್ದಾರೆ. ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ರಕ್ಷಣಾ ಸಚಿವಾಲಯ ಪ್ರಕಟಿಸಿದೆ.
ನಾಪತ್ತೆಯಾಗಿರುವ ಇಬ್ಬರಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ರಕ್ಷಣಾ ಖಾತೆ ಉಪಸಚಿವ ಅಂಟೋನ್ ಜೆರೆಶ್ನೆಕೋವ್ ಹೇಳಿದ್ದಾರೆ. ಈ ವಿಮಾನ 28 ಪ್ರಯಾಣಿಕರನ್ನು ಒಯ್ಯುತ್ತಿತ್ತು ಎನ್ನಲಾಗಿದ್ದು, ಈ ಪೈಕಿ 21 ಸೇನಾ ವಿದ್ಯಾರ್ಥಿಗಳು ಹಾಗೂ ಏಳು ಮಂದಿ ತಂತ್ರಜ್ಞರಿದ್ದರು. ಅಂಟನೋವ್-26 ಸಾರಿಗೆ ವಿಮಾನ, ಚುಯೀವ್ ಸೇನಾ ನೆಲೆಯಿಂದ ಎರಡು ಕಿಲೋಮೀಟರ್ ದೂರದಲ್ಲಿ ಸ್ಥಳೀಯ ಕಾಲಮಾನದ ಪ್ರಕಾರ ರಾತ್ರಿ 8.50ಕ್ಕೆ ಅಪಘಾತಕ್ಕೀಡಾಗಿದೆ. ಅಪಘಾತ ಸಂಭವಿಸಿದ ತಕ್ಷಣ ವಿಮಾನಕ್ಕೆ ಬೆಂಕಿ ಹತ್ತಿಕೊಂಡಿದ್ದು, ಒಂದು ಗಂಟೆ ಕಾಲ ಉರಿಯುತ್ತಿತ್ತು ಎಂದು ತಿಳಿದುಬಂದಿದೆ.
ದುರಂತದ ಕಾರಣ ಪತ್ತೆ ಮಾಡಲು ತನಿಖಾ ಆಯೋಗವನ್ನು ನೇಮಕ ಮಾಡಲಾಗುವುದು ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆಕ್ಸಿ ಅವರು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಶನಿವಾರ ಭೇಟಿ ನೀಡುವುದಾಗಿಯೂ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಬಸ್ ನಿಲ್ದಾಣದಲ್ಲಿ ಮಗು ಸಿಕ್ಕ ಪ್ರಕರಣಕ್ಕೆ ಟ್ವಿಸ್ಟ್ : ತನಿಖೆಯಲ್ಲಿ ಬಯಲಾಯ್ತು ಅಕ್ರಮ ಸಂಬಂಧದ ಅಸಲಿಯತ್ತು

newsics.com ಮೈಸೂರು: ಕಳೆದ 15 ದಿನಗಳ ಹಿಂದೆ ರಾಯಚೂರಿನ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಯುವಕನ ಕೈಗೆ ಮಗುವನ್ನು ಕೊಟ್ಟು ಪರಾರಿಯಾದ ಪ್ರಕರಣ ಇದೀಗ ಹೊಸ ತಿರುವನ್ನೇ ಪಡೆದುಕೊಂಡಿದೆ....

ಪ್ರವಾಸಿಗರನ್ನು ಸ್ಕೂಬಾ ಡೈವಿಂಗ್ ಗೆ ಹೊತ್ತೊಯ್ದ ದೋಣಿ ಮುಳುಗಡೆ; ಇಬ್ಬರು ಸಾವು

newsics.com ಮಹಾರಾಷ್ಟ್ರ: ಸ್ಕೂಬಾ ಡೈವಿಂಗ್ ವೇಳೆ 20 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿಯು ಮುಳುಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ನಡೆದಿದೆ. ಅಷ್ಟೇ ಅಲ್ಲದೇ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಹಾರಾಷ್ಟ್ರದ...

ತಮ್ಮ ಪಾಠ ಸೇರ್ಪಡೆಗೆ ಅನುಮತಿ ನಿರಾಕರಿಸಿದ ಲೇಖಕ ದೇವನೂರ ಮಹಾದೇವ

newsics.com ಮೈಸೂರು: 'ನನ್ನ ಪಾಠ ಸೇರಿದ್ದರೆ ಕೂಡಲೇ ಕೈ ಬಿಡಬೇಕು' ಎಂದು ಪಠ್ಯ ಪುಸ್ತಕ ಪರಿಷ್ಕರಣೆಗೆ ವಿರೋಧ ವ್ಯಕ್ತಪಡಿಸಿರುವ ಲೇಖಕ ದೇವನೂರ ಮಹಾದೇವ ತಮ್ಮ ಪಾಠ ಸೇರ್ಪಡೆಗೆ ಅನುಮತಿ ನಿರಾಕರಿಸಿದ್ದಾರೆ. 'ನನ್ನದೊಂದು ಕಥನವನ್ನು ಹತ್ತನೇ ತರಗತಿ...
- Advertisement -
error: Content is protected !!