Wednesday, October 5, 2022

ಸರ್ಕಾರಿ ಕೆಲಸಕ್ಕೆ ಸೇರಿದ್ದಕ್ಕೆ ಯುವತಿಯ ಕಣ್ಣುಕಿತ್ತ ದುಷ್ಕರ್ಮಿಗಳು

Follow Us

newaics.com
ಕಾಬೂಲ್: ಮನೆಯ ಹೊಸ್ತಿಲು ದಾಟಿ ಕೆಲಸಕ್ಕೆ ಹೋಗುತ್ತಿದ್ದಾಳೆ ಎಂಬ ಕಾರಣಕ್ಕೆ ಯುವತಿಯೊಬ್ಬಳ ಕಣ್ಣು ಕಿತ್ತ ಘಟನೆ ಅಪ್ಘಾನಿಸ್ತಾನದಲ್ಲಿ ನಡೆದಿದೆ. ಅಪ್ಘಾನಿಸ್ತಾನದ ಘಜನಿ ಪ್ರಾಂತ್ಯದಲ್ಲಿ ಈ ಘಟನೆ ಸಂಭವಿಸಿದೆ. ಬೈಕ್ ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಪೊಲೀಸ್ ಅಧಿಕಾರಿಯಾಗಿ ಕೆಲಸಕ್ಕೆ ಸೇರಿದ್ದ 25ರ ಹರೆಯದ ಯುವತಿಯೊಬ್ಬಳ ಕಣ್ಣು ಕೀಳುವ ಪ್ರಯತ್ನ ನಡೆಸಿದ್ದಾರೆ.

ದುಷ್ಕರ್ಮಿಗಳ ದಾಳಿಗೆ ತುತ್ತಾದ ಯುವತಿಯನ್ನು ಖತೇರಾ ಎಂದು ಗುರುತಿಸಲಾಗಿದೆ. ಚಿಕ್ಕಂದಿನಿಂದಲೇ ಸರ್ಕಾರಿ ಕೆಲಸಕ್ಕೆ ಸೇರಬೇಕು ಎಂದು ಅವರ ಕನಸಾಗಿತ್ತು. ಶಿಕ್ಷಣ ಪೂರೈಸಿದ ಬಳಿಕ ಪೊಲೀಸ್ ಅಧಿಕಾರಿಯಾಗಿ ನೇಮಕಗೊಂಡಿದ್ದರು. ಕೆಲ ವಾರಗಳ ಹಿಂದೆ ಅವರು ಕರ್ತವ್ಯಕ್ಕೆ ಹಾಜರಾಗಿದ್ದರು.

ಪೊಲೀಸ್ ಠಾಣೆಯಿಂದ ಹೊರಬರುವ ವೇಳೆ ಅವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಅವರ ಕಣ್ಣಿನ ಮೇಲೆ ಹಲ್ಲೆ ನಡೆಸಲಾಗಿದೆ.  ಇದೀಗ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಚೇತರಿಕೆಗೆ ಸಮಯ ಬೇಕು ಎಂದು ಪರಿಣಿತ ವೈದ್ಯರು ಹೇಳಿದ್ದಾರೆ.

ಖತೇರಾ ಅವರ ತಂದೆ ಕೂಡ ಮಗಳು ಕೆಲಸಕ್ಕೆ ಹೋಗುವುದನ್ನು ವಿರೋಧಿಸಿದ್ದರು ಎಂದು ಆರೋಪಿಸಲಾಗಿದೆ. ಇದು ತಾಲಿಬಾನ್’ಗಳ ಕೃತ್ಯ ಎಂಬ ಶಂಕೆ ಮೂಡಿದೆ. ತಾಲಿಬಾನ್’ಗಳು ಈ ಆರೋಪ ನಿರಾಕರಿಸಿದ್ದಾರೆ.

ಬಾಲಕಿಯರನ್ನು ಒತ್ತೆಯಲ್ಲಿರಿಸಿ ಅತ್ಯಾಚಾರ: ನಾಲ್ಕು ಆರೋಪಿಗಳ ಬಂಧನ

ಉಗ್ರರ ಅಡಗುತಾಣದಲ್ಲಿದ್ದ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ವಶ

ಡ್ರಗ್ಸ್ ದಂಧೆ ಬಯಲಿಗೆಳೆವ ಭಯ; ಟಿವಿ ಪತ್ರಕರ್ತನ ಕೊಲೆ

ರಸ್ತೆ ಅಪಘಾತ; ಸ್ಥಳದಲ್ಲೇ 7 ಜನ ಸಾವು, ನಾಲ್ವರಿಗೆ ಗಾಯ

ಪ್ರಿ ವೆಡ್ಡಿಂಗ್ ಫೋಟೊಶೂಟ್; ತೆಪ್ಪ ಮುಳುಗಿ ವಧು, ವರ ಸಾವು

ಕೆಂಪು ಬಣ್ಣಕ್ಕೆ ತಿರುಗಿದ ನದಿ ನೀರು: ಆತಂಕಗೊಂಡ ಜನರು

ರಾಜ್ಯದಲ್ಲಿ ಶಾಲೆ ಆರಂಭಕ್ಕೆ ಸರ್ಕಾರ ಗಡಿಬಿಡಿ; ಪೋಷಕರ ಸಿಡಿಮಿಡಿ

 

ಮತ್ತಷ್ಟು ಸುದ್ದಿಗಳು

vertical

Latest News

ಪ್ರಪಾತಕ್ಕೆ ಉರುಳಿದ ಬಸ್: 25 ಮಂದಿ ಸಾವು, 23 ಪ್ರಯಾಣಿಕರಿಗೆ ಗಾಯ

newsics.com ಪೌರಿ (ಉತ್ತರಾಖಂಡ): ಬಸ್ಸೊಂದು 500 ಮೀಟರ್ ಪ್ರಪಾತಕ್ಕೆ ಉರುಳಿದ ಪರಿಣಾಮ 25 ಪ್ರಯಾಣಿಕರು ಸಾವನ್ನಪ್ಪಿದ ಭೀಕರ ದುರಂತ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ...

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...
- Advertisement -
error: Content is protected !!