newsics.com
ಢಾಕಾ: ಬಾಂಗ್ಲಾ ದೇಶದಲ್ಲಿ ಅಲ್ಪ ಸಂಖ್ಯಾತ ಹಿಂದೂಗಳು ಮತ್ತು ದೇವಸ್ಥಾನಗಳನ್ನು ಗುರಿಯಾಗಿರಿಸಿ ದಾಳಿ ಮುಂದುವರಿದಿದೆ.
ಬಾಂಗ್ಲಾ ದೇಶದ ನೋಕಾಲಿ ಜಿಲ್ಲೆಯಲ್ಲಿ ದುಷ್ಕರ್ಮಿಗಳು ಇಸ್ಕಾನ್ ದೇವಸ್ಥಾನದ ಮೇಲೆ ದಾಳಿ ನಡೆಸಿದ್ದಾರೆ.
ದೇವಸ್ಥಾನದಲ್ಲಿ ದಾಂಧಲೆ ಮಾಡಿದ್ದಾರೆ. ದೇವಸ್ಥಾನಕ್ಕೆ ಹಾನಿಯಾಗಿದೆ ಎಂದು ವರದಿಯಾಗಿದೆ. ಭಕ್ತರ ಮೇಲೆ ಕೂಡ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಭಕ್ತನೊಬ್ಬ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.