Saturday, April 17, 2021

ಗೂಗಲ್ ಪ್ಲೇ ಸ್ಟೋರ್ ನಲ್ಲಿ ಮತ್ತೆ ಕಾಣಿಸಿಕೊಂಡ ಮಿತ್ರೋ ಆ್ಯಪ್

ನ್ಯೂಯಾರ್ಕ್: ದೇಸಿ ಟಿಕ್ ಟಾಕ್  ಆ್ಯಪ್ ಎಂದು ಹೆಸರು ಪಡೆದಿರುವ ಮಿತ್ರೊ ಇದೀಗ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಮತ್ತೆ ಕಾಣಿಸಿಕೊಂಡಿದೆ. ಅತ್ಯಂತ ಕಡಿಮೆ ಅವಧಿಯಲ್ಲಿ ದಾಖಲೆ 50 ಲಕ್ಷ ಡೌನ್ ಲೋಡ್ ಹೊಂದಿ ಈ ಆ್ಯಪ್ ಅಚ್ಚರಿ ಮೂಡಿಸಿತ್ತು. ಬಳಿಕ ಇದ್ದಕ್ಕಿದ ಹಾಗೆ ಗೂಗಲ್ ಪ್ಲೇ ಸ್ಟೋರ್ ನಿಂದ ಕಣ್ಮರೆಯಾಗಿತ್ತು. ಕೆಲವು ನಿಬಂಧನೆಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಗೂಗಲ್ ಪ್ಲೇ ಸ್ಟೋರ್ ನಿಂದ ಇದನ್ನು ತೆಗೆದುಹಾಕಲಾಗಿತ್ತು. ಮಿತ್ರೋ ಆ್ಯಪ್ ಕೂಡ ವಿವಾದಗಳಿಂದ ಹೊರತಾಗಿಲ್ಲ. ಪಾಕಿಸ್ತಾನದ ಮೂಲದ ಡೆವಲಪರ್ಸ್ ಇದನ್ನು ಅಭಿವೃದ್ದಿಪಡಿಸಿದ್ದಾರೆ ಎಂದು ಹೇಳಲಾಗಿತ್ತು.  ಪಾಕ್ ಮೂಲದ ಡೆವಲಪರ್ಸ್ ಅಭಿವೃದ್ದಿಪಡಿಸಿದ ಸೋರ್ಸ್ ಕೋಡನ್ನು ಕೋರ್ಡ್  ಕ್ಯಾನನ್ ನಿಂದ ಖರೀದಿಸಲಾಗಿತ್ತು ಎಂಬ ಟೀಕೆಗಳು ಕೇಳಿ ಬಂದಿದ್ದವು. ಗೂಗಲ್ ಪ್ಲೇ ಸ್ಟೋರ್ ನಿಂದ ಮಿತ್ರೊ ಆ್ಯಪ್ ಕಿತ್ತೆಗೆದ ಬಳಿಕ ಹಲವು ನಕಲಿ ಮಿತ್ರೊ ಆ್ಯಪ್ ಗಳು ಕೂಡ ಸೃಷ್ಟಿಯಾಗಿದ್ದವು.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!