Saturday, April 17, 2021

ಪಾಕಿಸ್ತಾನದಲ್ಲಿ 58000 ದಾಟಿದ ಕೊರೋನಾ ಸೋಂಕಿತರ ಸಂಖ್ಯೆ

 ಇಸ್ಲಾಮಾಬಾದ್:  ಪಾಕಿಸ್ತಾನದಲ್ಲಿ ಮಾರಕ ಕೊರೋನಾ ವೇಗವಾಗಿ ಹರಡುತ್ತಿದೆ. ಆರಂಭದಲ್ಲಿ ಕೊರೋನಾದ ಬಗ್ಗೆ ಸ್ಪಷ್ಟ ಚಿತ್ರಣ ನೀಡಲು ಪಾಕಿಸ್ತಾನ ನಿರಾಕರಿಸಿತ್ತು. ಇದೀಗ ಪಾಕಿಸ್ತಾನದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 58000 ಮೀರಿದೆ. ಪಂಜಾಬ್ ಮತ್ತು ಸಿಂಧ್ ಪ್ರಾಂತ್ಯಗಳಲ್ಲಿ ಕೊರೋನಾ ಆತಂಕದ ಅಲೆ ನಿರ್ಮಿಸಿದೆ. ಈ ಎರಡು ಪ್ರಾಂತ್ಯಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 44000 ಆಗಿದೆ. ಪಂಜಾಬ್ ನಲ್ಲಿ 20000 ದಷ್ಟು ಕೊರೋನಾ ಪ್ರಕರಣ ವರದಿಯಾಗಿದೆ. ಪಾಕಿಸ್ತಾನದಲ್ಲಿ ಆರೋಗ್ಯ ವ್ಯವಸ್ಥೆ ಅಷ್ಟು ಸುಧಾರಿಸಿಲ್ಲ. ಗ್ರಾಮೀಣ ಪ್ರದೇಶಗಳಲ್ಲಿ ಪರಿಸ್ಥಿತಿ ಶೋಚನೀಯವಾಗಿದೆ. ಪಾಕಿಸ್ತಾನದಲ್ಲಿ ಕೊರೋನಾ 1202 ಮಂದಿಯ ಪ್ರಾಣ ಅಪಹರಿಸಿದೆ. ಕೊರೋನಾ ತಡೆಗಟ್ಟಲು ಸಾಮಾಜಿಕ ಅಂತರ ಕಾಪಾಡಬೇಕು ಎಂದು ಸರ್ಕಾರ ಮನವಿ ಮಾಡಿದೆ

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!