ವಾಷಿಂಗ್ಟನ್: ಮಾರಕ ಕೊರೋನಾ ವಿಶ್ವದ ಮೂಲೆ ಮೂಲೆಗೆ ಹರಡುತ್ತಿದೆ. ಕಳೆದ ಐದು ದಿನಗಳಿಂದ ಪ್ರತಿದಿನ ಎರಡು ಲಕ್ಷಕ್ಕಿಂತಲೂ ಹೆಚ್ಚು ಮಂದಿ ಕೊರೋನಾ ರೋಗಕ್ಕೆ ತುತ್ತಾಗಿದ್ದಾರೆ. ಕಳೆದ 24 ಗಂಟೆ ಅವಧಿಯಲ್ಲಿ ವಿಶ್ವದಲ್ಲಿ 2, 22, 931 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.
ಅಮೆರಿಕದಲ್ಲಿ 33 ಲಕ್ಷಕ್ಕಿಂತಲೂ ಹೆಚ್ಚು ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ರಷ್ಯಾ, ಬ್ರೆಜಿಲ್ ಮತ್ತು ಭಾರತದಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿರುವುದಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಕಳವಳ ವ್ಯಕ್ತಪಡಿಸಿದೆ.
ಆರ್ಥಿಕ ಚಟುವಟಿಕೆ ಪುನಶ್ಚೇತನದ ಹೆಸರಿನಲ್ಲಿ ವಿಶ್ವದ ಬಹುತೇಕ ದೇಶಗಳು ನಿರ್ಬಂಧದಲ್ಲಿ ಸಡಿಲಿಕೆ ಮಾಡಿರುವುದೇ ರೋಗ ವ್ಯಾಪಕವಾಗಿ ಹರಡುತ್ತಿರುವುದಕ್ಕೆ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ. ನಿರ್ಬಂಧ ಸಡಿಲಿಕೆ ಸಂದರ್ಭದಲ್ಲಿ ಎಚ್ಚರ ಅತ್ಯಗತ್ಯ ಎಂಬ ಸೂಚನೆಯನ್ನು ವಿಶ್ವ ಆರೋಗ್ಯ ಸಂಸ್ಥೆ ನೀಡಿತ್ತು