Monday, April 12, 2021

ಪಾಕಿಸ್ತಾನದ ಶೇಕಡ 40 ಪೈಲಟ್ ಗಳು ನಕಲಿಯಂತೆ

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಪೈಲಟ್ ಗಳಲ್ಲಿ ಕೂಡ ಭಾರಿ ಸಂಖ್ಯೆಯ ನಕಲಿ ಪೈಲಟ್ ಗಳು ಇರುವ ಅಂಶ ಬೆಳಕಿಗೆ ಬಂದಿದೆ. ಪಾಕಿಸ್ತಾನದಲ್ಲಿರುವ ಒಟ್ಟು 860 ಪೈಲಟ್ ಗಳ ಪೈಕಿ 262 ಮಂದಿ ನಕಲಿ ಎಂಬುದು ತನಿಖೆಯಿಂದ ಬೆಳಕಿಗೆ ಬಂದಿದೆ. ಇವರು ಯಾರು ಕೂಡ ಪರೀಕ್ಷೆಗೆ ಹಾಜರಾಗಿರಲಿಲ್ಲ. ಇವರ ಬದಲಿಗೆ ಇತರರು ಪರೀಕ್ಷೆ ಬರೆದಿದ್ದರು  ಎಂದು ಆರೋಪಿಸಲಾಗಿದೆ. ಇದರಿಂದಾಗಿ ಪಾಕಿಸ್ತಾನದ ಶೇಕ಼ಡ 40 ಪೈಲಟ್ ಗಳು ನಕಲಿ ಎಂಬುದು ದೃಢಪಟ್ಟಿದೆ. ಕೆಲವರಿಗೆ ಸಮರ್ಪಕವಾಗಿ ಸಂವಹನ ನಡೆಸಲು  ಕೂಡ ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ. ಕರಾಚಿಯಲ್ಲಿ ಪಾಕಿಸ್ತಾನ ಏರ್ ಲೈನ್ಸ್ ವಿಮಾನ ಪತನದ ಹಿನ್ನೆಲೆಯಲ್ಲಿ ಈ ಆರೋಪ ಮಹತ್ವ ಪಡೆದುಕೊಂಡಿದೆ. ಪೈಲಟ್ ವೈಫಲ್ಯವೇ ಕರಾಚಿ ವಿಮಾನ ದುರಂತಕ್ಕೆ ಕಾರಣ ಎಂಬುದು ತನಿಖೆಯಿಂದ ದೃಢಪಟ್ಟಿದೆ.  ಪಾಕಿಸ್ತಾನ ಪೈಲಟ್ ಗಳ ದುಸ್ಥಿತಿ ಕುರಿತು ಖ್ಯಾತ ಉದ್ಯಮಿ ಆನಂದ್ ಮಹೇಂದ್ರ ಕೂಡ ಟ್ವೀಟ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ. ಬಹುಶ: ಮನೆಯಿಂದಲೇ ಕರ್ತವ್ಯ ನಿರ್ವಹಿಸುತ್ತಿರಬೇಕು ಎಂದು ಹೇಳಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!