Tuesday, April 13, 2021

ವಿವಾದಿತ ನಕ್ಷೆ ಅಂಗೀಕರಿಸಿದ ನೇಪಾಳ ಸಚಿವ ಸಂಪುಟ

ಕಾಠ್ಮಂಡು:  ಭಾರತ ಮತ್ತು ನೇಪಾಳ ನಡುವಿನ ರಾಜತಾಂತ್ರಿಕ ಸಂಬಂಧ ಮತ್ತಷ್ಟು ಹದಗೆಟ್ಟಿದೆ. ಭಾರತದ ಭೂ ಪ್ರದೇಶವಾಗಿರುವ ಲಿಪುಲೇಕ್, ಕಾಲಾಪಾನಿ ಮತ್ತು ಲಿಂಪಿಯಾದುರ್ ತನ್ನ ಭೂ ಭಾಗ ಎಂದು ತೋರಿಸುವ ನಕ್ಷೆಯನ್ನು ನೇಪಾಳ ಸಚಿವ ಸಂಪುಟ ಅಂಗೀಕರಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ ನೇಪಾಳ ಅಧ್ಯಕ್ಷರಾದ  ವಿದ್ಯಾದೇವಿ ಭಂಡಾರಿ, ತನ್ನ ಭೂ ಪ್ರದೇಶ ಮರಳಿ ಪಡೆಯಲು  ನೇಪಾಳ ಎಲ್ಲ ಕ್ರಮ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ. ಚೀನಾದ ಕುಮ್ಮಕ್ಕಿನಿಂದಾಗಿ ನೇಪಾಳ ಭಾರತ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ವಿಶ್ಲೇಷಿಸಲಾಗಿದೆ. ಕೈಲಾಸ ಮಾನಸ ಸರೋವರ ಯಾತ್ರಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಭಾರತ ರಸ್ತೆ ನಿರ್ಮಾಣ ಮಾಡಿದ ಬಳಿಕ ಈ ವಿವಾದ ಭುಗಿಲೆದ್ದಿದೆ. ರಸ್ತೆ ಉದ್ಘಾಟನೆಯಾದ ಬಳಿಕ ನೇಪಾಳದಲ್ಲಿರುವ ಭಾರತ ರಾಯಭಾರಿ  ವಿನಯ್ ಮೋಹನ್ ಅವರನ್ನು ಕರೆಯಿಸಿಕೊಂಡಿದ್ದ ನೇಪಾಳ ವಿದೇಶಾಂಗ ಇಲಾಖೆ ತನ್ನ ಪ್ರತಿಭಟನೆ ವ್ಯಕ್ತಪಡಿಸಿತ್ತು. ನೇಪಾಳ ಹಕ್ಕು ಮಂಡಿಸಿರುವ ಪ್ರದೇಶ ತನ್ನ ಭೂ ಭಾಗ ಎಂದು ಭಾರತ ಈಗಾಗಲೇ ಸ್ಪಷ್ಟಪಡಿಸಿದೆ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!