ಕಾಠ್ಮಂಡು: ನೇಪಾಳ ಪ್ರಧಾನಿ ಕೆ. ಪಿ. ಶರ್ಮಾ ಓಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ್ದಾರೆ. ಇಂದು ಮೋದಿ ಅವರ 70ನೇ ಹುಟ್ಟು ಹಬ್ಬವಾಗಿದೆ. ಭಾರತ ವಿರೋಧಿ ಧೋರಣೆ ಪ್ರದರ್ಶಿಸುತ್ತಿರುವ ನೇಪಾಳ ಪ್ರಧಾನಿ ಹುಟ್ಟು ಹಬ್ಬದ ಶುಭ ಕೋರಿರುವುದು ರಾಜತಾಂತ್ರಿಕ ವಲಯಗಳಲ್ಲಿ ಮಹತ್ವ ಪಡೆದುಕೊಂಡಿದೆ. ನೇಪಾಳ ಇತ್ತೀಚಿನ ದಿನಗಳಲ್ಲಿ ಚೀನಾದ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ ಎಂದು ಆರೋಪಿಸಲಾಗಿದೆ.
ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಕೂಡ ಪ್ರಧಾನಿ ಮೋದಿ ಅವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ್ದಾರೆ. ಉಭಯ ದೇಶಗಳ ಸಂಬಂಧ ಇನ್ನಷ್ಟು ಬಲಗೊಳ್ಳಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ