newsics.com
ವಾಷಿಂಗ್ಟನ್; ಕಾಸ್ಟ್ ಕಟ್ಟಿಂಗ್ ನೆಪದಲ್ಲಿ ಜನಪ್ರಿಯ ಒಟಿಟಿ ಪ್ಲಾಟ್ಫಾರ್ಮ್ ನೆಟ್ಫ್ಲಿಕ್ಸ್ ಮತ್ತೆ 300 ಉದ್ಯೋಗಿಗಳನ್ನು ವಜಾ ಮಾಡಿದೆ.
ಈ ಹಿಂದೆ ಭಾರೀ ಪ್ರಮಾಣದಲ್ಲಿ ಬಳಕೆದಾರರನ್ನು ಕಳೆದುಕೊಂಡ ಬಳಿಕ 150 ಉದ್ಯೋಗಿಗಳನ್ನು ತೆಗೆದುಹಾಕಿತ್ತು. ಇದೀಗ ಮತ್ತೆ 300 ಉದ್ಯೋಗಿಗಳನ್ನು ಕೆಲಸದಿಂದ ತೆಗೆದಿದೆ.
ಮಾರುಕಟ್ಟೆಯಲ್ಲಿ ಹೂಡಿಕೆಯನ್ನು ನಿಯಂತ್ರಣದಲ್ಲಿಟ್ಟುಕೊಂಡು ವೆಚ್ಚವನ್ನು ಕಡಿಮೆ ಮಾಡಲು ಉದ್ಯೋಗಿಗಳನ್ನು ತೆಗೆಯಲಾಗಿದೆ ಎಂದು ನೆಟ್ಫ್ಲಿಕ್ಸ್ ಹೇಳಿಕೊಂಡಿದೆ.