newsics.com
ವಾಷಿಂಗ್ಟನ್: ವಿಶ್ವ ಬ್ಯಾಂಕಿನ ಮಹತ್ವದ ಸಭೆಯಲ್ಲಿ ಭಾಗವಹಿಸಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಮೆರಿಕಕ್ಕೆ ಭೇಟಿ ನೀಡಿದ್ದಾರೆ.
ವಾಷಿಂಗ್ಟನ್ ಡಿ ಸಿ ಯಲ್ಲಿ ಅವರು ಹಿರಿಯ ಅಧಿಕಾರಿಗಳ ಜತೆ ಮಾತುಕತೆ ನಡೆಸಿದರು. ಭಾರತದ ಅಮೆರಿಕ ರಾಯಭಾರಿ ತರಣ್ ಜಿತ್ ಸಿಂಗ್ ಸಂಧು ಸೇರಿದಂತೆ ಹಿರಿಯ ಅಧಿಕಾರಿಗಳು ಅವರಿಗೆ ಪೂರಕ ಮಾಹಿತಿ ನೀಡಿದರು.
ಭಾರತದ ಮೂಲ ಭೂತ ಸೌಲಭ್ಯ ಅಭಿವೃದ್ದಿಗೆ ಹೆಚ್ಚಿನ ನೆರವು ನೀಡುವಂತೆ ವಿಶ್ವ ಬ್ಯಾಂಕ್ ಗೆ ಕೇಂದ್ರ ಸರ್ಕಾರ ಮನವಿ ಮಾಡಿದೆ.