Saturday, April 17, 2021

ಭಾರತದಲ್ಲಿ ಆರ್ಥಿಕ ಬೆಳವಣಿಗೆ ಸಹಜ ಸ್ಥಿತಿಗೆ ಮರಳುತ್ತಿದೆ: ಗೀತಾ ಗೋಪಿನಾಥ್

newsics.com

ವಾಷಿಂಗ್ಟನ್: ಭಾರತದ ಆರ್ಥಿಕ ಬೆಳವಣಿಗೆ ಚೇತರಿಸುತ್ತಿರುವ ಎಲ್ಲ ಮುನ್ಸೂಚನೆಗೆಳು ದೊರೆಯುತ್ತಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಯ ಮುಖ್ಯ ಆರ್ಥಿಕ ಸಲಹೆಗಾರರಾದ ಗೀತಾ ಗೋಪಿನಾಥ್ ಅಭಿಪ್ರಾಯಪಟ್ಟಿದ್ದಾರೆ.

2021-22 ಹಣಕಾಸು ವರ್ಷದಲ್ಲಿ ಭಾರತ ಶೇಕಡ 12 ರಷ್ಟು ಆರ್ಥಿಕ ಬೆಳವಣಿಗೆ ದಾಖಲಿಸಲಿದೆ ಎಂದು ಐಎಂಎಫ್ ಭವಿಷ್ಯ ನುಡಿದಿತ್ತು. ಅದರ ಬೆನ್ನಹಿಂದೆಯೇ ಗೀತಾ ಗೋಪಿನಾಥ್ ಈ ಹೇಳಿಕೆ ನೀಡಿದ್ದಾರೆ.

ಐಎಂಎಪ್ ನ ಪ್ರಮುಖ ನೀತಿ ನಿರೂಪಣಾ ಸಭೆಯಲ್ಲಿ ಭಾಗವಹಿಸಲು ಗೀತಾ ಗೋಪಿನಾಥ್ ಇದೀಗ ವಾಷಿಂಗ್ಟನ್ ತಲುಪಿದ್ದಾರೆ.

ಚೀನಾಕ್ಕಿಂತ ಉತ್ತಮ ಆರ್ಥಿಕ ಬೆಳವಣಿಗೆ ಭಾರತ ದಾಖಲಿಸಲಿದ್ದು, ಇದು ಆಶಾದಾಯಕ ವಾಗಿದೆ ಎಂದು ಐಎಂಎಫ್ ತನ್ನ ವರದಿಯಲ್ಲಿ ಹೇಳಿತ್ತು.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!