Saturday, April 17, 2021

ಅಣುಬಾಂಬ್ ಪರೀಕ್ಷೆಗೆ ಅಮೆರಿಕ ಸಿದ್ಧತೆ: ಉತ್ತರ ಕೊರಿಯಾದಿಂದ ಪ್ರತಿತಂತ್ರ

ವಾಷಿಂಗ್ಟನ್: 1992ರ ಬಳಿಕ ಮೊದಲ ಬಾರಿಗೆ ಅಮೆರಿಕ ಅಣು ಬಾಂಬ್ ಪರೀಕ್ಷೆ ನಡೆಸಲು ಸಜ್ಜಾಗುತ್ತಿದೆ ಎಂದು ವರದಿಯಾಗಿದೆ. ವಾಷಿಂಗ್ಟನ್ ಪೋಸ್ಟ್ ಪತ್ರಿಕೆ ಈ ವರದಿ ಮಾಡಿದೆ. ಚೀನಾ ಮತ್ತು ರಷ್ಯಾವನ್ನು ಬೆದರಿಸುವ ತಂತ್ರದ ಅಂಗವಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹೆಜ್ಜೆ ಇರಿಸಿದ್ದಾರೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಅಮೆರಿಕದ ಶತ್ರು ರಾಷ್ಟ್ರ ಎಂದೇ ಗುರುತಿಸಿಕೊಂಡಿರುವ ಉತ್ತರ ಕೊರಿಯಾ ಕೂಡ  ಪ್ರತಿತಂತ್ರ ಹೆಣೆಯುತ್ತಿದೆ.  ಉನ್ನತ ಸೇನಾಧಿಕಾರಿಗಳ ಸಭೆ ನಡೆಸಿರುವ ಉತ್ತರ ಕೊರಿಯಾದ ಸರ್ವಾಧಿಕಾರಿ  ಕಿಮ್ ಜೋಂಗ್, ನಿರ್ಣಾಯಕ  ಕ್ರಮ ತೆಗೆದುಕೊಳ್ಳಲು ಸೂಚಿಸಿದ್ದಾರೆ. ಅಣ್ವಸ್ತ್ರ ಭಯಕಾರಕದ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ಕಿಮ್ ಜೋಂಗ್ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ. ಉತ್ತರ ಕೊರಿಯಾ ಅಣುಬಾಂಬ್ ಹೊಂದಿರುವುದು   ವಿಶ್ವ ಶಾಂತಿಗೆ ಮಾರಕ ಎಂಬ ನಿಲುವನ್ನು ಅಮೆರಿಕ ಹೊಂದಿದೆ.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!