Thursday, December 2, 2021

ವದಂತಿಗಳಿಗೆ ತೆರೆ ಎಳೆದ ಕಿಮ್ ಜಾಂಗ್

Follow Us

ಪ್ಯೊಂಗ್ ಯಾಂಗ್:  ಮೂರು ವಾರಗಳ ಬಳಿಕ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಇದರೊಂದಿಗೆ ಅವರ ಆರೋಗ್ಯ ಕುರಿತ ಎಲ್ಲ ವದಂತಿಗೆ ತಾತ್ಕಾಲಿಕ ತೆರೆ ಬಿದ್ದಿದೆ. ಹೃದಯ ಶಸ್ತ್ರ ಚಿಕಿತ್ಸೆಗೆ ಒಳಪಟ್ಟ ಬಳಿಕ ಕಿಮ್ ಜಾಂಗ್ ಅವರ ಆರೋಗ್ಯ ಪರಿಸ್ಥಿತಿ ತೀರಾ ಹದಗೆಟ್ಟಿದೆ ಎಂದು ವರದಿಯಾಗಿತ್ತು. ಅವರ ಪ್ರಾಣ ಪಕ್ಷಿ ಹಾರಿ ಹೋಗಿತ್ತು ಎಂಬ ವರದಿಗಳು ಕೂಡ ಹರಿದಾಡಿದ್ದವು. ಸುಂಬೋನ್ ನಗರದಲ್ಲಿ ಗೊಬ್ಬರ ಕಾರ್ಖಾನೆಯೊಂದನ್ನು ಕಿಮ್ ಜಾಂಗ್ ಉದ್ಘಾಟಿಸಿದರು ಎಂದು ಉತ್ತರ ಕೊರಿಯಾದ ಸೆಂಟ್ರಲ್ ನ್ಯೂಸ್ ವರದಿ ಮಾಡಿದೆ. ಆದರೆ ಈ‌ ಕಾರ್ಯಕ್ರಮದ ಫೋಟೋ ಅಥವಾ ವಿಡಿಯೋ‌ ಲಭ್ಯವಾಗಿಲ್ಲ. ಕೆಲವು ದಿನಗಳ ಹಿಂದೆ ಅಮೆರಿಕದ ಬೇಹುಗಾರಿಕಾ ಉಪಗ್ರಹಗಳು ಕೂಡ ಕಿಮ್ ಜಾಂಗ್ ಜೀವಂತವಾಗಿರುವುದರ ಚಿತ್ರಗಳನ್ನು ಸೆರೆ ಹಿಡಿದು ಶ್ವೇತ ಭವನಕ್ಕೆ ರವಾನಿಸಿತ್ತು. ಹಾಂಗ್ ಕಾಂಗ್ ಟಿವಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಕಿಮ್ ಮೃತಪಟ್ಟಿದ್ದಾರೆ ಎಂದು ಸರಣಿ ವರದಿಗಳು ಹರಿದಾಡಿದ್ದವು.

ಮತ್ತಷ್ಟು ಸುದ್ದಿಗಳು

Latest News

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...
- Advertisement -
error: Content is protected !!