newsics.com
ಟೆಲ್ ಅವೀವ್: ಇಸ್ರೇಲ್ ನಲ್ಲಿ ಕೊರೋನಾ ಎರಡನೆ ಅಲೆ ಭೀತಿ ಎದುರಾಗಿದೆ. ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಮತ್ತು ರೋಗ ನಿಯಂತ್ರಣಕ್ಕಾಗೆ ಇಸ್ರೇಲ್ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ಇದರ ಅಂಗವಾಗಿ ದೇಶದಲ್ಲಿ ಮತ್ತೆ ಲಾಕ್ ಡೌನ್ ಜಾರಿಗೆ ನಿರ್ಧರಿಸಲಾಗಿದೆ.
ಶುಕ್ರವಾರದಿಂದ ಜಾರಿಗೆ ಬರುವಂತೆ ದೇಶದಲ್ಲಿ ಮೂರು ವಾರಗಳ ಕಾಲ ಲಾಕ್ ಡೌನ್ ಘೋಷಿಸಲಾಗಿದೆ. ಇದರಿಂದ ಕೊರೋನಾ ನಿಯಂತ್ರಿಸಲು ಸಾಧ್ಯವಾಗಲಿದೆ ಎಂಬ ವಿಶ್ವಾಸವನ್ನು ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಕೊರೋನಾ ನಿಯಂತ್ರಿಸಲು ಇದು ಅತ್ಯಗತ್ಯವಾಗಿದೆ. ಜನರು ಸಹಕಾರ ನೀಡಬೇಕು ಎಂದು ನೆತನ್ಯಾಹು ಮನವಿ ಮಾಡಿದ್ದಾರೆ.
ಕೊರೋನಾ ಎರಡನೆ ಅಲೆ: ಮತ್ತೆ ಮೂರು ವಾರ ಲಾಕ್ ಡೌನ್ ಘೋಷಣೆ
Follow Us