ಇಸ್ಲಾಮಾಬಾದ್: ಪಾಕಿಸ್ತಾನ ಮತ್ತು ಭಾರತ ಮಧ್ಯೆ ರೈಲು ಮತ್ತು ಬಸ್ ಸಂಚಾರ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನದಲ್ಲಿರುವ ಹಿಂದೂಗಳು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಅಗಲಿದ ಕುಟುಂಬ ಸದಸ್ಯರ ಚಿತಾಭಸ್ಮವನ್ನು ನದಿಯಲ್ಲಿ ವಿಸರ್ಜಿಸದೆ ಮನೆಯಲ್ಲಿ ಇರಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಹೆಚ್ಚಿನ ಕುಟುಂಬಗಳ ಸದಸ್ಯರು ಅಗಲಿದ ತಮ್ಮ ಹಿರಿಯರ ಚಿತಾಭಸ್ಮವನ್ನು ಅಲಹಾಬಾದ್ ನಲ್ಲಿ ಗಂಗಾ ನದಿಯಲ್ಲಿ ವಿಸರ್ಜಿಸಲು ಬಯಸುತ್ತಿದ್ದಾರೆ. ಆದರೆ ಸದ್ಯಕ್ಕೆ ಸಾರಿಗೆ ಸಂಪರ್ಕ ಇಲ್ಲದಿರುವುದು ಭಾರತಕ್ಕೆ ಆಗಮಿಸಲು ಅಡ್ಡಿಯಾಗಿದೆ. ಭಾರತ ಮತ್ತು ಪಾಕಿಸ್ತಾನ ಮಧ್ಯೆ ಉದ್ವಿಗ್ನ ಪರಿಸ್ಥಿತಿ ನೆಲೆಸಿರುವ ಹಿನ್ನೆಲೆಯಲ್ಲಿ ಕಳೆದ ಆಗಸ್ಟ್ ನಿಂದ ರೈಲು ಮತ್ತು ಬಸ್ ಸಂಪರ್ಕ ವ್ಯವಸ್ಥೆ ಸ್ಥಗಿತಗೊಂಡಿದೆ.