ಲಾಹೋರ್: ಪಾಕಿಸ್ತಾನದ ಮಾಜಿ ಅಧ್ಯಕ್ಷ ಹಾಗೂ ಮಾಜಿ ಸೇನಾ ಮುಖ್ಯಸ್ಥ ಪರ್ವೇಜ್ ಮುಷರಫ್ ಅವರಿಗೆ ವಿಧಿಸಿದ್ದ ಮರಣದಂಡನೆಯನ್ನು ಪಾಕಿಸ್ತಾನ ಹೈಕೋರ್ಟ್ ರದ್ದುಗೊಳಿಸಿದೆ.
ಮುಷರಫ್ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್, ಮುಷರಫ್ ವಿರುದ್ಧ ದಾಖಲಾದ ದೂರು ಅಸಾಂವಿಧಾನಿಕ ಎಂದು ನ್ಯಾಯಾಲಯ ತೀರ್ಪು ನೀಡಿದೆ. 2007ರಲ್ಲಿ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದು ದೇಶದ್ರೋಹ ಎಂದು ಪರಿಗಣಿಸಿದ್ದ ಹೈಕೋರ್ಟ್ ನ ವಿಶೇಷ ಪೀಠ ಡಿ. 17ರಂದು ಮರಣದಂಡನೆ ವಿಧಿಸಿತ್ತು,