Friday, May 20, 2022

ಜಪಾನ್ ನೂತನ ಪ್ರಧಾನಿಯಾಗಿ ಯೋಶಿದಿ ಸುಗಾ ನೇಮಕ

Follow Us

ಟೋಕಿಯೊ: ಜಪಾನ್ ನೂತನ ಪ್ರಧಾನಿಯಾಗಿ ಯೋಶಿದಿ ಸುಗಾ ಅವರನ್ನು ನೇಮಕ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿಶ್ವ ನಾಯಕರು ಅವರಿಗೆ ಶುಭ ಹಾರೈಸಿದ್ದಾರೆ. ಪ್ರಧಾನಿ ಮೋದಿ ಜಪಾನಿ ಭಾಷೆಯಲ್ಲಿ ಟ್ವೀಟ್ ಮಾಡುವುದರ ಮೂಲಕ ಜಪಾನ್ ನೂತನ ಪ್ರಧಾನಿಗೆ ಶುಭ ಕೋರಿದ್ದಾರೆ.

ಭಾರತ ಮತ್ತು ಜಪಾನ್ ಮಧ್ಯೆ  ರಕ್ಷಣಾ ಸಂಬಂಧ ಅತ್ಯುನ್ನತ ಮಟ್ಟದಲ್ಲಿದೆ. ಇದು ಮುಂಬರುವ ದಿನಗಳಲ್ಲಿ ಇನ್ನಷ್ಟು ಬಲಗೊಳ್ಳಲಿದೆ ಎಂಬ ಆಶಾವಾದವನ್ನು  ಪ್ರಧಾನಿ ನರೇಂದ್ರ ಮೋದಿ ವ್ಯಕ್ತಪಡಿಸಿದ್ದಾರೆ.

ಜಪಾನ್ ನಲ್ಲಿ ಒಲಿಂಪಿಕ್ಸ್  ಕ್ರೀಡಾಕೂಟ ಆಯೋಜನೆ ಮತ್ತು ಕೊರೋನಾ ಸೃಷ್ಟಿಸಿರುವ ಆರ್ಥಿಕ ಬಿಕ್ಕಟ್ಟು ನೂತನ ಪ್ರಧಾನಿ ಮುಂದಿರುವ ಪ್ರಮುಖ ಸವಾಲಾಗಿದೆ. ಇದರ ಜತೆಗೆ ಚೀನಾ ಜಪಾನ್ ಸಮುದ್ರ ತೀರದಲ್ಲಿ ಆಧಿಪತ್ಯ ಸ್ಥಾಪಿಸಲು ನಡೆಸುತ್ತಿರುವ ಯತ್ನವನ್ನು ಕೂಡ ಜಪಾನ್ ಎದುರಿಸಬೇಕಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಮತ್ತೆ ಚಿನ್ನ, ಬೆಳ್ಳಿ ದುಬಾರಿ

newsics.com ಬೆಂಗಳೂರು: ಶುಕ್ರವಾರ (ಮೇ 20) ಚಿನ್ನ, ಬೆಳ್ಳಿ ಮತ್ತೆ ದುಬಾರಿಯಾಗಿದೆ. 10 ಗ್ರಾಂ ಚಿನ್ನಕ್ಕೆ 640 ರೂ. ಹೆಚ್ಚಳವಾಗಿದೆ. ಬೆಳ್ಳಿ 1 ಕೆಜಿಗೆ ಬರೋಬ್ಬರಿ 900...

ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ ಸಾಧ್ಯತೆ

newsics.com ಬೆಂಗಳೂರು: ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಈ‌ ಮಾಹಿತಿ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಚಿವ ನಾಗೇಶ್, ದ್ವಿತೀಯ ಪಿಯು...

ಕೆನಡಾ ಪಾರ್ಲಿಮೆಂಟ್ ನಲ್ಲಿ ಕನ್ನಡದಲ್ಲಿ ಮಾತನಾಡಿದ ಸಂಸದ ಚಂದ್ರ ಆರ್ಯ

newsics.com ಕೆನಡಾ: ಕೆನಡಾ ಪಾರ್ಲಿಮೆಂಟ್ ನಲ್ಲಿ ಸಂಸದ ಚಂದ್ರ ಆರ್ಯ ಕನ್ನಡದಲ್ಲಿ ಮಾತನಾಡಿದ್ದು, ಇದೇ ಮೊದಲ ಬಾರಿಗೆ ಕೆನಡಾ ಪಾರ್ಲಿಮೆಂಟ್ ನಲ್ಲಿ ಕನ್ನಡದ ಕಹಳೆ ಮೊಳಗಿದೆ. ನಾನು ನನ್ನ ಮಾತೃ ಭಾಷೆಯಾದ ಕನ್ನಡದಲ್ಲಿ ಮಾತನಾಡುತ್ತೇನೆ ಎಂದ...
- Advertisement -
error: Content is protected !!