newsics.com
ಜಪಾನ್ನಲ್ಲಿ ಎರಡು ದಿನಗಳ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿಗೆ ಟೋಕಿಯೋದಲ್ಲಿ ಭರ್ಜರಿ ಸ್ವಾಗತ ಸಿಕ್ಕಿದೆ. ಈ ಸಂದರ್ಭದಲ್ಲಿ ಭಾರತದ ತ್ರಿವರ್ಣ ಧ್ವಜ ಕೈಯಲ್ಲಿ ಹಿಡಿದಿದ್ದ ಜಪಾನಿ ಬಾಲಕನೊಬ್ಬ ಪ್ರಧಾನಿಯೊಂದಿಗೆ ಮೂರು ಹಿಂದಿ ವಾಕ್ಯಗಳಲ್ಲಿ ಮಾತನಾಡಿದ್ದಾನೆ.
ಜಪಾನಿ ಹುಡುಗನ ಬಾಯಲ್ಲಿ ಹಿಂದಿ ಕೇಳಿ ಖುಷಿಪಟ್ಟ ಪ್ರಧಾನಿ ಮೋದಿಗೆ ಹಿಂದಿ ನಿನಗೆ ಬರುತ್ತದೆಯೇ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಬಾಲಕ ನನಗೆ ಹಿಂದಿ ಅರ್ಥವಾಗುತ್ತದೆ. ಮುಂದಿನ ದಿನಗಳಲ್ಲಿ ಸಂಪೂರ್ಣ ಹಿಂದಿ ಭಾಷೆಯನ್ನು ಕಲಿಯುತ್ತೇನೆ ಎಂದು ಹೇಳಿದ್ದಾನೆ. ಈ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.
#WATCH | "Waah! Where did you learn Hindi from?… You know it pretty well?," PM Modi to Japanese kids who were awaiting his autograph with Indian kids on his arrival at a hotel in Tokyo, Japan pic.twitter.com/xbNRlSUjik
— ANI (@ANI) May 22, 2022