Monday, April 12, 2021

ಸೇನೆ ಮೂಲಕ ಪ್ರತಿಭಟನೆ ತಡೆಯಲು ಮುಂದಾದ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಮೆರಿಕದಲ್ಲಿ ಭುಗಿಲೆದ್ದಿರುವ ಜನಾಂಗೀಯ ಪ್ರತಿಭಟನೆ ತಡೆಯಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೇನೆಗೆ ಆದೇಶ ನೀಡಿದ್ದಾರೆ.
ವಾಷಿಂಗ್ಟನ್‌ನಲ್ಲಿ ಇನ್ನಷ್ಟು ಪ್ರತಿಭಟನೆ ತಡೆಯಲು ಶಸ್ತ್ರಸಜ್ಜಿತ ಸೈನಿಕರು ಹಾಗೂ ಪೊಲೀಸರನ್ನು ನಿಯೋಜಿಸುತ್ತಿದ್ದೇನೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ವಾಷಿಂಗ್ಟನ್‌ನಲ್ಲಿ ನಡೆದಿರುವ ಪ್ರತಿಭಟನೆಯಿಂದ ತೀರಾ ಅವಮಾನವಾಗಿದೆ ಎಂದು ದೇಶವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಟ್ರಂಪ್ ಹೇಳಿದ್ದಾರೆ. ಜಾರ್ಜ್ ಫ್ಲಾಯ್ಡ್ ಸಾವನ್ನು ಪ್ರತಿಭಟಿಸಿ ಇಲ್ಲಿನ ಶ್ವೇತಭವನದ ಸಮೀಪ ನಡೆದ ಪ್ರತಿಭಟನೆಗಳ ವೇಳೆ, ಅದರ ಸಮೀಪದ ಕಟ್ಟಡಗಳು ಮತ್ತು ಸ್ಮಾರಕಗಳಿಗೆ ಪ್ರತಿಭಟನಾಕಾರರು ಹಾನಿ ಮಾಡಿದ ಬಳಿಕ ಟ್ರಂಪ್ ಈ ಹೇಳಿಕೆ ನೀಡಿದ್ದಾರೆ.
ವಿದ್ವಂಸಕ ಕೃತ್ಯಗಳು, ದಾಳಿಗಳು ಮತ್ತು ಸೊತ್ತು ನಾಶವನ್ನು ನಿಲ್ಲಿಸಲು ನಾನು ಸಾವಿರಾರು ಭಾರೀ ಶಸ್ತ್ರಸಜ್ಜಿತ ಸೈನಿಕರು, ಸೇನಾ ಸಿಬ್ಬಂದಿ ಮತ್ತು ಕಾನೂನು ಅನುಷ್ಠಾನ ಅಧಿಕಾರಿಗಳನ್ನು ಕಳುಹಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಈ ಭಯೋತ್ಪಾದನೆಯ ಸಂಘಟಕರಿಗೆ ನೋಟಿಸ್ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ನಿಮಗೆ ಕಠಿಣ ಕ್ರಿಮಿನಲ್ ದಂಡಗಳು ಹಾಗೂ ದೀರ್ಘಾವಧಿ ಜೈಲು ಶಿಕ್ಷೆಗಳು ಕಾದಿವೆ ಎಂದು ಪ್ರತಿಭಟನಾಕಾರರನ್ನು ಎಚ್ಚರಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!