Saturday, April 17, 2021

ಕೊನೆಗೂ ಮಾಸ್ಕ್ ಧರಿಸಿದ ಅಮೆರಿಕ ಅಧ್ಯಕ್ಷ ಟ್ರಂಪ್

ವಾಷಿಂಗ್ಟನ್: ಕೊರೋನಾ ತಡೆಗಟ್ಟುವ ಸಂಬಂಧ ಎಲ್ಲರೂ ಮಾಸ್ಕ್ ಧರಿಸಬೇಕು ಎಂದು ಉಪದೇಶ ಮಾಡುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದುವರೆಗೂ ಮಾಸ್ಕ್ ಧರಿಸಿರಲಿಲ್ಲ. ಇದು ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಇದೀಗ ಮೊದಲ ಬಾರಿಗೆ ಟ್ರಂಪ್ ಮಾಸ್ಕ್ ಧರಿಸಿರುವ ಪೋಟೋ ಪ್ರಕಟವಾಗಿದೆ. ಶನಿವಾರ ಸೇನಾ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಟ್ರಂಪ್ , ಮಾಸ್ಕ್ ಧರಿಸಿದ್ದರು. ಹೌದು ನಾನು ಮಾಸ್ಕ್ ಧರಿಸಿದ್ದೇನೆ. ಕೊರೋನಾ ವ್ಯಾಪಕವಾಗಿ ಹರಡುತ್ತಿದೆ. ಅದಕ್ಕಾಗಿ  ಮಾಸ್ಕ್ ನ ಮೊರೆ ಹೋಗಿದ್ದೇನೆ ಎಂದು ಟ್ರಂಪ್ ಪ್ರತಿಕ್ರಿಯಿಸಿದ್ದಾರೆ.

ಮಾಸ್ಕ್ ಧರಿಸಿದರೆ ಉಸಿರಾಟಕ್ಕೆ ತೊಂದರೆಯಾಗುತ್ತದೆ ಎಂಬ ಭಯ ಟ್ರಂಪ್ ಅವರನ್ನು ಕಾಡುತ್ತಿತ್ತು. ಇದರಿಂದ ಮಾಸ್ಕ್ ಧರಿಸುವುದರಿಂದ ಹಿಂದೆ ಸರಿಯುತ್ತಿದ್ದರು ಎಂದು ಟ್ರಂಪ್ ಆಪ್ತರು ಈ ಹಿಂದೆ ಹೇಳಿದ್ದರು. ಇದೀಗ ಕೊರೋನಾ ಮಹಾಮಾರಿ ಗಂಭೀರ ಹಂತ ತಲುಪಿದ್ದು, ವಿಶ್ವದ ಎಲ್ಲ ರಾಜಕೀಯ ನಾಯಕರು ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಳ್ಳುವ ಮುನ್ನ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುತ್ತಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!