Saturday, April 17, 2021

ರಷ್ಯಾ ಸಂಸ್ಕೃತಿ ಸಚಿವರಿಗೂ ತಟ್ಟಿದ ಕೊರೋನಾ

ಮಾಸ್ಕೋ: ರಷ್ಯಾ ರಾಜಧಾನಿ ಮಾಸ್ಕೊದಲ್ಲಿ ಮಾರಕ ಕೊರೋನಾ ರಣಕೇಕೆ ಮುಂದುವರಿಸಿದೆ.  24 ಗಂಟೆ ಅವಧಿಯಲ್ಲಿ ರಷ್ಯಾದಲ್ಲಿ 11, 231 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.  ಕೊರೋನಾ ತಡೆಗಟ್ಟಲು ಮೇ 11ರ ವರೆಗೆ ರಷ್ಯಾದಲ್ಲಿ ನಿರ್ಬಂಧ ಹೇರಲಾಗಿದೆ. ಕೊರೋನಾದಿಂದ  ಮಾಸ್ಕೋದಲ್ಲಿ ಇದುವರೆಗೆ  860 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.  ರಾಜಧಾನಿ ಮಾಸ್ಕೊದಲ್ಲಿ 85,000 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದೇ ವೇಳೆ ರಷ್ಯಾ ಪ್ರಧಾನಿ ಬಳಿಕ ಅಲ್ಲಿನ ಸಂಸ್ಕೃತಿ ಸಚಿವೆ  ಒಲ್ಗಾ ಲುಯಿಂಬೋವಾ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಈ ಕುರಿತು  ಅಧಿಕೃತ ಹೇಳಿಕೆ ಕೂಡ ಬಿಡುಗಡೆ ಮಾಡಲಾಗಿದೆ. ಈ ಮಧ್ಯೆ ಅತ್ಯಂತ ಎಚ್ಚರಿಕೆಯಿಂದ ಲಾಕ್ ಡೌನ್ ನಿಯಮ ಸಡಿಲಗೊಳಿಸುವಂತೆ ರಷ್ಯಾ ಅಧ್ಯಕ್ಷ ಪುಟಿನ್ ಸೂಚಿಸಿದ್ದಾರೆ. ಮುಂದಿನ ದಿನಗಳಲ್ಲಿ ಅಪಾಯದ ಮಟ್ಟ ತಲುಪದಂತೆ ನೋಡಿಕೊಳ್ಳಿ ಎಂದು ಪುಟಿನ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!