NEWSICS.COM
ರಷ್ಯಾ: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗೆ ಆರೋಗ್ಯದಲ್ಲಿ ಏರುಪೇರು ಉಂಟಾದ ಕಾರಣ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಪುಟಿನ್ ಗೆ ಪಾರ್ಕಿನ್ ಸನ್ ಕಾಯಿಲೆ ಕಾಣಿಸಿಕೊಂಡಿದ್ದರಿಂದ ಸದ್ಯ ಮನೆಯಿಂದಲೇ ಕೆಲಸ ನಿರ್ವಹಿಸುತ್ತಿದ್ದಾರೆ.
ಮುಂದಿನ ದಿನಗಳಲ್ಲಿ ಕಾಯಿಲೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಕುಟುಂಬ ಸದಸ್ಯರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಅಲ್ಲದೆ ವೈದರು ಕೂಡ ಹುದ್ದೆಯ ನಿರ್ವಹಣೆ ಸರಿಯಲ್ಲ ಎಂದಿದ್ದಾರೆ.
68 ವರ್ಷದ ಪುಟಿನ್ ಜನವರಿಯಲ್ಲಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎನ್ನಲಾಗಿದೆ. ಸತತ 20 ವರ್ಷಗಳಿಂದ ರಷ್ಯಾದಲ್ಲಿ ಪುಟಿನ್ ಆಡಳಿತ ನಡೆಸುತ್ತಿದ್ದಾರೆ. ಅಲ್ಲದೆ ಸಂವಿಧಾನದಲ್ಲಿ ತಿದ್ದುಪಡಿ ತಂದು ಜೀವನ ಪೂರ್ತಿ ಅಧ್ಯಕ್ಷರಾಗಿ ಮುಂದುವರೆಯಲು ಅವಕಾಶ ಮಾಡಿಕೊಂಡಿದ್ದಾರೆ. ಸದ್ಯ ದೇಶ ಕೂಡ ಆರ್ಥಿಕವಾಗಿ ಕಷ್ಟದಲ್ಲಿರುವ ಕಾರಣ ಪುಟಿನ್ ನಿರ್ಧಾರ ರಷ್ಯಾ ಜನತೆಯನ್ನು ಗಾಬರಿಗೊಳಿಸಿದೆ.