ರಿಯಾದ್: ಕಳೆದ 10 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೌದಿ ದೊರೆ ಸಲ್ಮಾನ್ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಒಂದು ವಾರದ ಹಿಂದೆ ಸಲ್ಮಾನ್ ಅವರಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ಬಳಿಕ ಒಂದು ವಾರ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುವಂತೆ ಅವರಿಗೆ ಸೂಚಿಸಲಾಗಿತ್ತು.
ಆಸ್ಪತ್ರೆಯಿಂದ ಬಿಡುಗಡೆಯಾದ ಕೂಡಲೇ ಮಾತನಾಡಿದ ದೊರೆ ಸಲ್ಮಾನ್, ಜನರು ಕೋವಿಡ್ ಎದುರಿಸಲು ಮುನ್ನೆಚ್ಚರಿಕೆ ವಹಿಸಬೇಕು ಎಂದು ಮನವಿಮಾಡಿದರು.
84ರ ಹರೆಯದ ಸೌದಿ ದೊರೆ ಸಲ್ಮಾನ್ ಅವರು ವಯೋ ಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೇರಿದಂತೆ ವಿಶ್ವ ನಾಯಕರು ಸಲ್ಮಾನ್ ಅವರ ಶೀಘ್ರ ಚೇತರಿಕೆಗೆ ಹಾರೈಸಿದ್ದರು.