Sunday, December 5, 2021

ಚೀನಾದ ಗ್ಸಿನ್ ಜಿಯಾಂಗ್ ಪ್ರದೇಶದಲ್ಲಿ ಶಾಲೆಗಳ ಪುನಾರಂಭ

Follow Us

ಉರುಮ್ಕಿ: ಮಾರಣಾಂತಿಕ ಕೊರೋನಾ ವೈರಾಣು ಸೋಂಕಿನಿಂದ ಬಹುತೇಕ ಸ್ತಬ್ಧವಾಗಿದ್ದ ಚೀನಾದ ಕೆಲ ಪ್ರಾಂತ್ಯಗಳು ನಿಧಾನವಾಗಿ ಚೇತರಿಕೆ ಕಾಣುತ್ತಿವೆ. ಅಲ್ಲಿನ ಗ್ಸಿನ್ ಜಿಯಾಂಗ್ ಪ್ರದೇಶದ ಶಾಲೆಗಳು ಪುನಾರಂಭಗೊಂಡಿದ್ದು,ಇಂದು 5.10 ಲಕ್ಷ ವಿದ್ಯಾರ್ಥಿಗಳು ಪ್ರೌಢಶಿಕ್ಷಣ ಹಾಗೂ ವೃತ್ತಿಪರ ಶಿಕ್ಷಣ ತರಗತಿಗಳಿಗೆ ಮರಳಿದ್ದಾರೆ.
ಈ ಪ್ರದೇಶದಲ್ಲಿ ಕಳೆದ 20 ದಿನಗಳಿಂದ ಯಾವುದೇ ಹೊಸ ಸೋಂಕಿನ ಪ್ರಕರಣಗಳು ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಪ್ರೌಢಶಿಕ್ಷಣ ಮತ್ತು ವೃತ್ತಿಪರ ಕೋರ್ಸ್ ಗಳ ಅಂತಿಮ ವರ್ಷದ ತರಗತಿಗಳನ್ನು ಪುನಾರಂಭಿಸಲಾಗಿದೆ.
ವಿದ್ಯಾರ್ಥಿಗಳಿಗೆ ಉಚಿತ ಮಾಸ್ಕ್ ಹಂಚಿಕೆ ಮಾಡಲಾಗಿದ್ದು, ಶಾಲಾ ಆವರಣದಲ್ಲಿ ಅವರ ತಾಪಮಾನ ಪರೀಕ್ಷಿಸಲಾಗುತ್ತಿದೆ. ಒಂದು ತರಗತಿಯಲ್ಲಿ 30ಕ್ಕಿಂತ ಹೆಚ್ಚು ಮಕ್ಕಳಿರದಂತೆ ಎಚ್ಚರಿಕೆ ವಹಿಸಲಾಗಿದೆ. ಆಹಾರವನ್ನು ಕೂಡ ವೈಯಕ್ತಿಕವಾಗಿ ಪೂರೈಸಲಾಗುತ್ತಿದೆ.

ಮತ್ತಷ್ಟು ಸುದ್ದಿಗಳು

Latest News

ಮುಂಬೈ ಏರ್‌ಪೋರ್ಟ್‌ನಲ್ಲಿ ನಟಿ ಜಾಕ್ವೆಲಿನ್ ಫೆರ್ನಾಂಡೀಸ್‌ಗೆ ತಡೆ

newsics.com ಮುಂಬೈ: ಖ್ಯಾತ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಅಧಿಕಾರಿಗಳು ತಡೆಯೊಡ್ಡಿದ್ದಾರೆ. ದುಬೈಗೆ ಹೊರಟಿದ್ದ ಜಾಕ್ವೆಲಿನ್ ಫೆರ್ನಾಂಡೀಸ್ ಅವರನ್ನು ಲುಕೌಟ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ತಡೆಯಲಾಗಿದೆ....

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 29,52,708 ಜನ ಗುಣಮುಖರಾಗಿದ್ದಾರೆ. 6 ಜನ ಸೋಂಕಿತರು...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...
- Advertisement -
error: Content is protected !!