Wednesday, October 28, 2020

ಕೊರೋನಾದಿಂದ ಕ್ಷಯರೋಗ ನಿವಾರಣೆಗೆ ಹಿನ್ನಡೆ

newsics.com
ಜಿನೀವ (ಸ್ವಿಟ್ಸರ್‌ಲ್ಯಾಂಡ್): ಮಾರಕ ಕ್ಷಯರೋಗ ನಿರ್ಮೂಲನೆಯಲ್ಲಿ ಈವರೆಗೆ ಸಾಧಿಸಲಾಗಿದ್ದ ಪ್ರಗತಿ ಕೊರೋನಾದಿಂದ ನಾಶವಾಗುವ ಆತಂಕ ಉಂಟಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.
ಕ್ಷಯರೋಗಕ್ಕೆ ಚಿಕಿತ್ಸೆಯಿದ್ದರೂ ಕಳೆದ ವರ್ಷ ಜಗತ್ತಿನಾದ್ಯಂತ ಸುಮಾರು 14 ಲಕ್ಷ ಮಂದಿ ಕ್ಷಯರೋಗಕ್ಕೆ ಬಲಿಯಾಗಿದ್ದರು. ಈ ವರ್ಷ ಇದಕ್ಕಿಂತಲೂ 2 ಲಕ್ಷದಿಂದ 4 ಲಕ್ಷ ಹೆಚ್ಚು ಸಾವುಗಳು ಸಂಭವಿಸುವ ಸಾಧ್ಯತೆಯಿದೆ ಎಂದು ಸಂಸ್ಥೆಯ ಮಹಾನಿರ್ದೇಶಕ ಟೆಡ್ರಾಸ್ ಅದನಾಮ್ ಗೇಬ್ರಿಯೇಸಸ್ ಹೇಳಿದ್ದಾರೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ಮುಂತಾದ ಅತಿ ಹೆಚ್ಚು ಕ್ಷಯರೋಗಪೀಡಿತ ದೇಶಗಳು ಕ್ಷಯರೋಗದ ಪತ್ತೆ ಮತ್ತು ಚಿಕಿತ್ಸೆಗಾಗಿ ಸಾಮಾನ್ಯವಾಗಿ ಬಿಡುಗಡೆ ಮಾಡುತ್ತಿರುವ ಹಣವನ್ನು ಈಗ ಕೊರೋನಾ ವೈರಸ್‌ನತ್ತ ತಿರುಗಿಸಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

Latest News

ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: 65 ಸಾಧಕರಿಗೆ ಪ್ರಶಸ್ತಿ ಗೌರವ

Newsics.com ಬೆಂಗಳೂರು: ರಾಜ್ಯದ ಪ್ರತಿಷ್ಠಿತ  2020ರ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಸಂಘ ಸಂಸ್ಥೆಗಳು, ಸಾಧಕರು ಸೇರಿದಂತೆ 65 ಮಂದಿಗೆ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ.  ಬೆಂಗಳೂರಿನಲ್ಲಿ  ಕನ್ನಡ ಮತ್ತು...

ಎನ್‌ಐಎನಿಂದ ಬೆಂಗಳೂರಲ್ಲಿ ಇನ್ನಿಬ್ಬರು ಶಂಕಿತ ಉಗ್ರರ ಬಂಧನ

newsics.comಬೆಂಗಳೂರು: ನಗರದಲ್ಲಿ ಶಂಕಿತ ಐಸಿಸ್ ಉಗ್ರರ ಭೇಟೆ ಮುಂದುವರಿಸಿರುವ ಎನ್‌ಐಎ ಅಧಿಕಾರಿಗಳ ತಂಡ, ಇದೀಗ ಇನ್ನಿಬ್ಬರು ಶಂಕಿತರನ್ನು ಬಂಧಿಸಿದೆ.ಬೆಂಗಳೂರಿನ ಥಣಿಸಂದ್ರದಲ್ಲಿರುವ ನಿವಾಸವೊಂದರ ಮೇಲೆ ದಾಳಿ ನಡೆಸಿರುವ ದೆಹಲಿ ಎನ್‌ಐಎ ಟೀಮ್,...

9 ಗಂಟೆ ವಿಚಾರಣೆ ವೇಳೆ ಮೋದಿಗೆ ಕೇಳಲಾಗಿತ್ತು 100 ಪ್ರಶ್ನೆ

Newsics.com ನವದೆಹಲಿ:  ಗುಜರಾತ್ ಹಿಂಸಾಚಾರ ಕುರಿತಂತೆ ತನಿಖೆ ನಡೆಸಿದ್ದ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿದ್ದ ರಾಘವನ್ , ಮೋದಿ ವಿಚಾರಣೆ ಕುರಿತು ಮಾಹಿತಿ ಬಹಿರಂಗಪಡಿಸಿದ್ದಾರೆ. ಸುಪ್ರೀಂ ಕೋರ್ಟ್ ಐಪಿಎಸ್ ಅಧಿಕಾರಿಯಾಗಿದ್ದ ರಾಘವನ್ ನೇತೃತ್ವದಲ್ಲಿ ವಿಶೇಷ...
- Advertisement -
- Advertisement -
error: Content is protected !!