Monday, August 8, 2022

ಶ್ವೇತಭವನದ ಏಳು ಮಂದಿಗೆ ಕೊರೋನಾ ಸೋಂಕು

Follow Us

newsics.com
ವಾಷಿಂಗ್ಟನ್‌: ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತು ಅವರ ಪತ್ನಿ ಮೆಲೇನಿಯಾ ಟ್ರಂಪ್‌ ಅವರಿಗೆ ಕೊರೋನಾ ಸೋಂಕು ತಗುಲಿದ ಬೆನ್ನಲ್ಲೇ ಟ್ರಂಪ್‌ ಮಾಜಿ ಸಲಹೆಗಾರ, ಅವರ ಪ್ರಚಾರ ವ್ಯವಸ್ಥಾಪಕ, ಇಬ್ಬರು ಸಂಸದರು ಹಾಗೂ ಶ್ವೇತ ಭವನದ ಮೂವರು ಪತ್ರಕರ್ತರು ಸೇರಿ ಏಳು ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ಟ್ರಂಪ್‌ ಮತ್ತು ಅವರ ಪತ್ನಿ ಮೆಲೇನಿಯಾ ಅವರಿಗೆ ಶುಕ್ರವಾರ ಸೋಂಕು ದೃಢಪಟ್ಟಿತ್ತು. ಬೆಥೆಸ್ಡಾದ ವಾಲ್ಟರ್ ರೀಡ್ ಮಿಲಿಟರಿ ವೈದ್ಯಕೀಯ ಕೇಂದ್ರದಲ್ಲಿ ಟ್ರಂಪ್‌ ಚಿಕಿತ್ಸೆ ಪಡೆಯುತ್ತಿದ್ದು, ಮೆಲೇನಿಯಾ ಅವರು ಶ್ವೇತಭವನದಲ್ಲಿ ಪ್ರತ್ಯೇಕ ವಾಸಕ್ಕೊಳಗಾಗಿದ್ದಾರೆ.
ಉತ್ತರ ಕೆರೊಲಿನಾದ ರಿಪಬ್ಲಿಕನ್ ಸಂಸದ ಥಾಮ್ ಟಿಲ್ಲಿಸ್ ಮತ್ತು ಉತಾಹ್‌ನ ಸಂಸದ ಮೈಕ್ ಲೀ ಅವರಲ್ಲೂ ಸೋಂಕು ದೃಢಪಟ್ಟಿದೆ. ಕೆಲವು ತಿಂಗಳಿನಿಂದ ನಾನು ಕೋವಿಡ್‌ ಪರೀಕ್ಷೆಗೆ ಒಳಗಾಗುತ್ತಿದ್ದೇನೆ. ಕಳೆದ ಶನಿವಾರ ಕೋವಿಡ್‌ ಪರೀಕ್ಷೆ ನಡೆಸಿದಾಗ ಸೋಂಕು ತಗುಲಿರಲಿಲ್ಲ. ಆದರೆ ಶುಕ್ರವಾರ ರಾತ್ರಿ ನಡೆಸಿದ ಪರೀಕ್ಷೆಯಲ್ಲಿ ಕೋವಿಡ್ ತಗುಲಿರುವುದು‌ ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ನಾನು ನಿವಾಸದಲ್ಲಿಯೇ ಪ್ರತ್ಯೇಕವಾಗಿ ವಾಸಿಸುತ್ತಿದ್ದೇನೆ. ನನಗೆ ಯಾವುದೇ ಕೋವಿಡ್‌ ಲಕ್ಷಣಗಳು ಇಲ್ಲ ಎಂದು ಥಾಮ್ ಟಿಲ್ಲಿಸ್ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಪಬ್ ನಲ್ಲಿ ಗಲಾಟೆ ಆರೋಪ: ಸುನಾಮಿ ಕಿಟ್ಟಿ ವಿರುದ್ಧ ದೂರು

newsics.com ಬೆಂಗಳೂರು: ನಗರದ ಪ್ರತಿಷ್ಟಿತ ಪಬ್ ನಲ್ಲಿ  ಕಿರುತೆರೆ ನಟ ಸುನಾಮಿ ಕಿಟ್ಟಿ ಮತ್ತು ಗೆಳೆಯರು ಗಲಾಟೆ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಕಬ್ಬನ್ ಪಾರ್ಕ್  ಠಾಣೆ...

ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ನಿತೀಶ್ ಕುಮಾರ್ ಕಸರತ್ತು

newsics.com ಪಾಟ್ನ: ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ರಾಜಕೀಯ ಮೈತ್ರಿ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಮಂಗಳವಾರ ಸಂಯುಕ್ತ ಜನತಾ ದಳದ ಮಹತ್ವದ ಚರ್ಚೆ ಪಾಟ್ನದಲ್ಲಿ ನಡೆಯಲಿದೆ. ಈ ಸಭೆಯಲ್ಲಿ  ಜೆಡಿಯುವಿನ ಸಂಸದರು, ಶಾಸಕರು  ಸೇರಿದಂದೆ...

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ಹತ್ಯೆ ಆರೋಪಿಗಳಿಗೆ ಸಹಕಾರ ನೀಡಿದ್ದಾರೆ...
- Advertisement -
error: Content is protected !!