ಬರ್ಲಿನ್: ಜರ್ಮನಿಯ ಹುಕ್ಕಾ ಬಾರ್ ವೊಂದರಲ್ಲಿ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಗೆ ಎಂಟು ಮಂದಿ ಬಲಿಯಾಗಿದ್ದಾರೆ. ಹನೌ ನಗರದಲ್ಲಿ ಈ ಘಟನೆ ಸಂಭವಿಸಿದೆ. ದುಷ್ಕರ್ಮಿಗಳು ಮನ ಬಂದಂತೆ ಗುಂಡು ಹಾರಿಸಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಗುಂಡಿನ ದಾಳಿಯಲ್ಲಿ ಹಲವು ಮಂದಿ ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿದೆ.