Sunday, December 5, 2021

ಕೊರೋನಾದಿಂದ ಖ್ಯಾತ ಸ್ಕ್ವ್ಯಾಷ್ ಆಟಗಾರ ಅಜಂ ಖಾನ್ ಸಾವು

Follow Us

ಲಂಡನ್: ಕೊರೋನಾ ವೈರಸ್ ನಿಂದಾಗಿ ಪಾಕಿಸ್ತಾನದ ಖ್ಯಾತ ಸ್ಕ್ವ್ಯಾಷ್ ಆಟಗಾರ ಅಜಂ ಖಾನ್ (95) ಮೃತಪಟ್ಟಿದ್ದಾರೆ.
ಅಜಂಖಾನ್ ಅವರಿಗೆ ಕಳೆದ ವಾರ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿತ್ತು. ಶನಿವಾರ ಲಂಡನ್ ನ ಈಲಿಂಗ್ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ ಎಂದು ಜಿಯೋ ಟಿವಿ ವರದಿ ಮಾಡಿದೆ.
ಜಗತ್ತಿನಾದ್ಯಂತ ಉತ್ತಮ ಸ್ಕ್ವ್ಯಾಷ್ ಆಟಗಾರ ಎಂದು ಹೆಸರು ಗಳಿಸಿದ್ದ ಅಜಂಖಾನ್, 1959-62ರ ನಡುವೆ ಸತತವಾಗಿ ನಾಲ್ಕು ಬಾರಿ ಬ್ರಿಟಿಷ್ ಓಪನ್ ಪ್ರಶಸ್ತಿ ಗೆದಿದ್ದರು. 1962ರಲ್ಲಿ ಮೊದಲ ಬಾರಿಗೆ ಅಮೆರಿಕ ಓಪನ್ ಟೂರ್ನಿಯಲ್ಲಿ ಪದಕ ಗೆದ್ದಿದ್ದರು.
ಕೊರೋನಾ ಸೋಂಕಿನಿಂದಾಗಿ ಪಾಕಿಸ್ತಾನದಲ್ಲಿ ಈವರೆಗೆ 16 ಜನರು ಮೃತಪಟ್ಟಿದ್ದು, ಸುಮಾರು 1600 ಜನರಿಗೆ ಈ ಸೋಂಕು ತಗುಲಿದೆ.

ಮತ್ತಷ್ಟು ಸುದ್ದಿಗಳು

Latest News

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...

ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣ ಪತ್ತೆ

newsics.com ಜೈಪುರ: ಮಹಾರಾಷ್ಟ್ರದ ಬಳಿಕ ಇದೀಗ ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ಒಂದೇ ಕುಟುಂಬದವರಲ್ಲಿ ಸೋಂಕು ಪತ್ತೆಯಾಗಿದ್ದು, ಇವರು ದಕ್ಷಿಣ ಆಫ್ರಿಕಾದಿಂದ ಬಂದವರು ಎಂದು ತಿಳಿದುಬಂದಿದೆ. ಮುಂಬೈನಲ್ಲಿ ಇಂದು ಒಂದೇ ದಿನ 7 ಜನರಿಗೆ...
- Advertisement -
error: Content is protected !!