Wednesday, October 5, 2022

ದೀಪಾವಳಿ ಆಚರಿಸದಂತೆ ಶ್ರೀಲಂಕಾ ಸರ್ಕಾರ ಮನವಿ

Follow Us

newsics.com
ಕೊಲಂಬೊ: ಕೊರೋನಾ ಸೋಂಕು ಹಿನ್ನೆಲೆಯಲ್ಲಿ ದೀಪಾವಳಿ ಹಬ್ಬ ಆಚರಿಸದಂತೆ ಶ್ರೀಲಂಕಾ ಸರ್ಕಾರ ಅಲ್ಲಿನ ಹಿಂದೂ ಸಮುದಾಯಕ್ಕೆ ಗುರುವಾರ ಮನವಿ ಮಾಡಿದೆ.
ದೀಪಾವಳಿ ವೇಳೆ ಧಾರ್ಮಿಕ ಸ್ಥಳಗಳಲ್ಲಿ ಹಬ್ಬದ ಚಟುವಟಿಕೆಗಳನ್ನು ಮೊಟಕುಗೊಳಿಸಬೇಕು ಎಂದು ಸರ್ಕಾರ ಕೋರಿದೆ. ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ 15 ಸಾವಿರಕ್ಕೂ ಹೆಚ್ಚು ಜನರಿಗೆ ಕೊರೋನಾ ಸೋಂಕು ತಗುಲಿದೆ. ‘ದೀಪಾವಳಿ ಆಚರಣೆಯ ವೇಳೆ ಆರೋಗ್ಯ ಸಚಿವಾಲಯದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಚಹಾ ತೋಟಗಳಲ್ಲಿ ಕೆಲಸ ಮಾಡುವ ಭಾರತ ಮೂಲದ ತಮಿಳರಿಗೆ ಆರೋಗ್ಯ ಇಲಾಖೆ ಸೂಚಿಸಿದೆ.
ಶ್ರೀಲಂಕಾದ ಪಶ್ಚಿಮ ಭಾಗವನ್ನು ಭಾನುವಾರ ಸಂಜೆಯವರೆಗೆ ಲಾಕ್‌ಡೌನ್‌ ಮಾಡಲಾಗಿತ್ತು. ಕಳೆದ 24 ಗಂಟೆಗಳಲ್ಲಿ ಶ್ರೀಲಂಕಾದಲ್ಲಿ 644 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಕೋವಿಡ್‌ ಪ್ರಕರಣ ಸಂಖ್ಯೆ 15,350ಕ್ಕೆ ಏರಿದೆ. 5,121 ಸಕ್ರಿಯ ಪ್ರಕರಣಗಳಿದ್ದು, 523 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇಶದಲ್ಲಿ 46 ಜನ ಅಸುನೀಗಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...
- Advertisement -
error: Content is protected !!