newsics.com
ಹೈಟಿ: ಹೈಟಿ ದೇಶದಲ್ಲಿ ಭೂಕಂಪ ಸಂಭವಿಸಿದ್ದು ರಿಕ್ಟರ್ ಮಾಪಕದಲ್ಲಿ 7.2ರಷ್ಟು ತೀವ್ರತೆ ದಾಖಲಾಗಿದೆ.
ಪ್ರಬಲ ಭೂಕಂಪದಿಂದ ಹಲವು ಕಟ್ಟಡಗಳು ನೆಲಸಮವಾಗಿದ್ದು, ಈವರೆಗೆ ಒಟ್ಟು 29 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ.
ರಾಜಧಾನಿ ಪೋರ್ಟ್-ಔ-ಪ್ರಿನ್ಸ್‌ನಿಂದ ಪಶ್ಚಿಮಕ್ಕೆ 150 ಕಿಮೀ ದೂರದಲ್ಲಿರುವ ಪೆಟಿಟ್ ಟ್ರೌ ಡಿ ನಿಪ್ಪೆಸ್ ಪಟ್ಟಣ ಬಳಿ 10 ಕಿಮೀ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಅಲ್ಲಿಯ ಭೂಕಂಪ ಶಾಸ್ತ್ರ ವಿಜ್ಞಾನಿಗಳು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಹೈಟಿ ಪ್ರಧಾನಿ ಏರಿಯಲ್ ಹೆನ್ರಿ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದಾರೆ ಎಂದು ವರದಿಯಾಗಿದೆ.