newsics.com
ತೈಪೆ: ತೈವಾನ್‌ನ ರಕ್ಷಣಾ ಸಚಿವಾಲಯದ ಸಂಶೋಧನೆ ಮತ್ತು ಅಭಿವೃದ್ಧಿ ಘಟಕದ ಉಪ ಮುಖ್ಯಸ್ಥ ಶನಿವಾರ ಬೆಳಗ್ಗೆ ಹೋಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ತೈವಾನ್‌ನ ಕ್ಷಿಪಣಿ ಅಭಿವೃದ್ಧಿ ತಂಡದ ನೇತೃತ್ವ ವಹಿಸಿದ್ದ ಉನ್ನತ ಅಧಿಕಾರಿ ಔ ಯಾಂಗ್ ಲಿ-ಹಸಿಂಗ್, ಅವರ ಸಾವಿಗೆ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ. ಸಾವಿನ ಕಾರಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಔ ಯಾಂಗ್ ಅವರು ವಿವಿಧ ಕ್ಷಿಪಣಿ ಉತ್ಪಾದನಾ ಯೋಜನೆಗಳ ಮೇಲ್ವಿಚಾರಣೆಗಾಗಿ ಈ ವರ್ಷದ ಆರಂಭದಲ್ಲಿ ಸೇನಾ ಒಡೆತನದ ನ್ಯಾಷನಲ್ ಚುಂಗ್ ಶಾನ್ ಇನ್ಸ್ ಟಿಟ್ಯೂಟ್ ಆಫ್ ಸೈನ್ಸ್ ಆ್ಯಂಡ್ ಟೆಕ್ನಾಲಜಿಯ ಉಪ ಮುಖ್ಯಸ್ಥನಾಗಿ ಅಧಿಕಾರ ವಹಿಸಿಕೊಂಡಿದ್ದರು. ರಾಷ್ಟ್ರೀಯ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯ ರಕ್ಷಣೆಯ ಹಿನ್ನೆಲೆಯಲ್ಲಿ ಚೀನಾದ ಪ್ರಬಲ ವಿರೋಧದ ನಡುವೆಯೂ ಅಮೆರಿಕ ಸಂಸತ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ತೈವಾನ್ ಗೆ ಭೇಟಿ ನೀಡಿದ ಕೆಲವೇ ದಿನಗಳಲ್ಲಿ ಹಸಿಂಗ್ ಶವವಾಗಿ ಪತ್ತೆಯಾಗಿದ್ದಾರೆ.
ನಡಿಗೆಯಲ್ಲಿ ಬೆಳ್ಳಿ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತದ ಪ್ರಿಯಾಂಕಾ ಗೋಸ್ವಾಮಿ