Monday, October 3, 2022

ಅಡ್ಡ ಪರಿಣಾಮ; ಚೀನಾದಲ್ಲಿ ಕೊರೋನಾ ಲಸಿಕೆ ಪ್ರಯೋಗ ತಾತ್ಕಾಲಿಕ ಸ್ಥಗಿತ

Follow Us

newsics.com
ಬೀಜಿಂಗ್: ಚೀನಾದ ಮುಂಚೂಣಿ ಲಸಿಕೆ ಪ್ರಯೋಗವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಪ್ರಯೋಗದ ಸಂದರ್ಭದಲ್ಲಿ ಲಸಿಕೆ ಬಳಕೆಯಿಂದ ಗಂಭೀರ ಪ್ರತಿಕೂಲ ಪರಿಣಾಮ ಉಂಟಾದ ಹಿನ್ನೆಲೆಯಲ್ಲಿ ಅಂತಿಮ ಹಂತದ ಪ್ರಯೋಗವನ್ನು ಸ್ಥಗಿತಗೊಳಿಸಲಾಗಿದೆ.
ಬ್ರೆಜಿಲ್ ನಲ್ಲಿ ನಡೆಯುತ್ತಿದ್ದ ಪ್ರಯೋಗವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ ಎಂದು ಬ್ರೆಜಿಲ್ ಆರೋಗ್ಯ ಸಂಸ್ಥೆ ತಿಳಿಸಿದೆ. ಸಿನೋವಾಕ್ ಬಯೋಟೆಕ್ ಲಿಮಿಟೆಡ್ ನ ಲಸಿಕೆ ಕೊರೋನಾವಾಕ್ ಬಳಕೆಯಿಂದ ಅಕ್ಟೋಬರ್ 29 ರಂದು ನಡೆದ ಘಟನೆಯ ನಂತರ ಪ್ರಯೋಗವನ್ನು ಸ್ಥಗಿತಗೊಳಿಸಿರುವುದಾಗಿ ಬ್ರೆಜಿಲ್ ಆರೋಗ್ಯ ಸಂಸ್ಥೆ ಹೇಳಿದೆ. ಆದರೆ, ಪ್ರಯೋಗದಲ್ಲಿ ಉಂಟಾದ ಪರಿಣಾಮಗಳ ಮಾಹಿತಿ ನೀಡಲಾಗಿಲ್ಲ.
ಸಿನೋವಾಕ್ ಜತೆ ಒಪ್ಪಂದ ಮಾಡಿಕೊಂಡಿರುವ ಸಾವೋಪೋಲೋ ಇನ್’ಸ್ಟಿಟ್ಯೂಟ್ ಬುಟಾಂಟನ್ ಕೂಡ ಈ ಬಗ್ಗೆ ಮಾಹಿತಿ ನೀಡಿಲ್ಲ. ನಿರ್ದೇಶಕ ಡಿಮಾಸ್ ಕೋವಾಸ್ ಸಂದರ್ಶನವೊಂದರಲ್ಲಿ, ಲಸಿಕೆ ಪ್ರಯೋಗದ ಸಂದರ್ಭದಲ್ಲಿ ಓರ್ವ ಸ್ವಯಂಸೇವಕ ಮೃತಪಟ್ಟಿದ್ದಾನೆ. ಆದರೆ, ಲಸಿಕೆಯಿಂದಲೇ ಆತ ಮೃತಪಟ್ಟಿದ್ದಾನೆ ಎಂದು ಹೇಳಲಾಗುವುದಿಲ್ಲ ಎಂದು ಹೇಳಿದ್ದಾರೆ.
ಚೀನಾದಲ್ಲಿ ಕೊರೋನಾವಾಕ್ ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ಲಕ್ಷಾಂತರ ಜನರಿಗೆ ಲಸಿಕೆ ನೀಡಲಾಗುತ್ತಿದೆ.

ಇಷ್ಟು ಪಾಪಗಳ ಮಾಡಿದ್ದೇ ಸಾಕು…

ಕೋವಿಡ್ ಪರೀಕ್ಷೆ: ವಿಶ್ವದಲ್ಲಿ ಭಾರತಕ್ಕೆ ಎರಡನೇ ಸ್ಥಾನ

ಬೆಂಗಳೂರಿನಲ್ಲಿ 1176, ರಾಜ್ಯದಲ್ಲಿ 2362 ಮಂದಿಗೆ ಕೊರೋನಾ, 20 ಬಲಿ

ಕೋಲ್ಕತ್ತಾದಲ್ಲಿ ಅಗ್ನಿ ದುರಂತ; 50-60 ಮನೆ ಬೆಂಕಿಗಾಹುತಿ

ಕಾರ್ಮಿಕರ ಪ್ರತಿಭಟನೆ; ತಾತ್ಕಾಲಿಕ ಲಾಕೌಟ್ ಘೋಷಿಸಿದ ಟೊಯೊಟಾ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!