Saturday, April 17, 2021

ಅಪಘಾನಿಸ್ತಾನದಲ್ಲಿ ಭಯೋತ್ಪಾದಕರ ದಾಳಿ: ಸತ್ತವರ ಸಂಖ್ಯೆ 40ಕ್ಕೆ ಏರಿಕೆ

ಕಾಬೂಲ್: ಅಪಘಾನಿಸ್ತಾನದಲ್ಲಿ ತಾಲಿಬಾನ್ ಬೆಂಬಲಿತ ಉಗ್ರರು ನಡೆಸಿದ ಎರಡು ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 40ಕ್ಕೆ ಏರಿದೆ. ಕಾಬೂಲ್ ನಲ್ಲಿರುವ ಆಸ್ಪತ್ರೆಗೆ ಪೊಲೀಸ್ ಸಮವಸ್ತ್ರ ಧರಿಸಿ ಬಂದ ಭಯೋತ್ಪಾದಕರು ಮನಸೋ ಇಚ್ಚೆ ಗುಂಡಿನ ದಾಳಿ ನಡೆಸಿದರು.  100ಕ್ಕೂ ಹೆಚ್ಚು ಮಂದಿ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೆರಿಗೆ ಆಸ್ಪತ್ರೆಯಾದ ಕಾರಣ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಗುಂಡಿನ ದಾಳಿಗೆ 15 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರೇ, 45ಕ್ಕೂ ಹೆಚ್ಚು ಮಂದಿ ಗಾಯಗೊಂಡರು. ಇನ್ನೊಂದೆಡೆ  ನಗರ್ ಹಾರ್  ಪ್ರಾಂತ್ಯದಲ್ಲಿ ಮೃತದೇಹದ ಮೆರವಣಿಗೆ ಮೇಲೂ ಭಯೋತ್ಪಾದಕರು ದಾಳಿ ನಡೆಸಿದ್ದಾರೆ.  ಭಯೋತ್ಪಾದಕರ ಕೃತ್ಯವನ್ನು ಅಪಘಾನಿಸ್ತಾನ ಅಧ್ಯಕ್ಷ  ಅಶ್ರಫ್ ಘನಿ ಖಂಡಿಸಿದ್ದಾರೆ. ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಅಪಘಾನಿಸ್ತಾನದ ಯೋಧರು ರಕ್ಷಣಾತ್ಮಕ ಕ್ರಮಕ್ಕೆ ವಿದಾಯ ಹೇಳಿ ಪ್ರತಿದಾಳಿಗೆ ಮುಂದಾಗುವಂತೆ ಆದೇಶ ನೀಡಿದರು. ಅಮೆರಿಕ ಕೂಡ ಅಪಘಾನಿಸ್ತಾನದಲ್ಲಿನ ದಾಳಿಯನ್ನು ಖಂಡಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅಮೆರಿಕದ ವಿದೇಶಾಂಗ ಸಚಿವ ಪೊಂಪೈ , ಇದು ಅತ್ಯಂತ ಹೀನಾಯ  ಕೃತ್ಯ ಎಂದು ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!