Wednesday, July 6, 2022

ಪಾಕಿಸ್ತಾನದಲ್ಲಿ ಭಯೋತ್ಪಾದಕರ ದಾಳಿ: ಓರ್ವ ಸೈನಿಕನ ಹತ್ಯೆ, ಮೂವರಿಗೆ ಗಾಯ

Follow Us

ಇಸ್ಲಾಮಾಬಾದ್: ಭಾರತದ ವಿರುದ್ದ ಭಯೋತ್ಪಾದಕರನ್ನು ಎತ್ತಿ ಕಟ್ಟುತ್ತಿರುವ ಪಾಕಿಸ್ತಾನ ಇದೀಗ ಭಯೋತ್ಪಾದಕರಿಂದಲೇ ಸಮಸ್ಯೆ ಎದುರಿಸುತ್ತಿದೆ. ಪಾಕಿಸ್ತಾನದ  ಬಲೂಚಿಸ್ತಾನ ಪ್ರಾಂತ್ಯದ ಟುರ್ಬಾಟ್ ಬಳಿ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಪಾಕ್ ಸೈನಿಕನೊಬ್ಬ  ಮೃತಪಟ್ಟಿದ್ದಾನೆ. ಇತರ ಮೂವರು ಸೈನಿಕರು ಗಾಯಗೊಂಡಿದ್ದಾರೆ.

ಮೃತಪಟ್ಟ ಸೈನಿಕನನ್ನು  ಜಾವೇದ್ ಕರೀಂ ಎಂದು ಗುರುತಿಸಲಾಗಿದೆ.ಬಲೂಚಿಸ್ತಾನ  ಪ್ರಾಂತ್ಯದ ಕೇಚ್ ಜಿಲ್ಲೆಯ ಪಿಡಾರಕ್ ಎಂಬಲ್ಲಿ ಗಸ್ತು ನಡೆಸುತ್ತಿದ್ದ ವೇಳೆ ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು.

ಜುಲೈ 14ರಂದು ಕೂಡ ಇದೇ ಮಾದರಿಯ ದಾಳಿ ನಡೆಸಲಾಗಿತ್ತು. ಪಂಜುಗುರ್ ಜಿಲ್ಲೆಯಲ್ಲಿ ಜುಲೈ 14 ರಂದು ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ  ಮೂವರು ಪಾಕ್ ಸೈನಿಕರು ಮೃತಪಟ್ಟಿದ್ದರು. ಹಿರಿಯ ಅಧಿಕಾರಿ ಸೇರಿದಂತೆ ಎಂಟು ಮಂದಿ ಗಾಯಗೊಂಡಿದ್ದರು.

ಮತ್ತಷ್ಟು ಸುದ್ದಿಗಳು

vertical

Latest News

ಒಟಿಪಿ ನೀಡುವ ವಿಷಯಕ್ಕೆ ಜಗಳ: ಪ್ರಯಾಣಿಕನ ಹತ್ಯೆ ಮಾಡಿದ ಕ್ಯಾಬ್ ಚಾಲಕ

newsics.com ಚೆನ್ನೈ: ಕಾರನ್ನು ಬಾಡಿಗೆಗೆ ನಿಗದಿಪಡಿಸಿ ಪ್ರಯಾಣ ಆರಂಭಿಸುವ ಮೊದಲು ಒಟಿಪಿ ನೀಡುವ ಜಗಳ ಪ್ರಯಾಣಿಕನ ಕೊಲೆಯಲ್ಲಿ ಅಂತ್ಯವಾಗಿದೆ. ಚೆನ್ನೈ ನಗರದ ನವಲೂರಿನಲ್ಲಿ ಈ...

ದೇಶದಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು, 28 ಜನರ ಸಾವು

newsics.com ನವದೆಹಲಿ:  ದೇಶದಲ್ಲಿ ಕೊರೋನಾದ ಹಾವಳಿ ಮುಂದುವರಿದಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 15,394 ಮಂದಿ ಗುಣಮುಖರಾಗಿದ್ದಾರೆ. ಕೊರೋನಾದಿಂದ ಕಳೆದ 24 ಗಂಟೆ...

ಆದಾಯ ತೆರಿಗೆ ವಂಚನೆ : ಡೋಲೋ ಮಾತ್ರೆ ಕಚೇರಿ ಮೇಲೆ ದೇಶವ್ಯಾಪಿ ದಾಳಿ

newsics.com ಬೆಂಗಳೂರು: ಆದಾಯ ತೆರಿಗೆ ವಂಚಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಖ್ಯಾತ ಮಾತ್ರೆ ತಯಾರಕ ಸಂಸ್ಥೆ ಡೋಲೋ ಮುಖ್ಯ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೇಶದ ಹಲವು ರಾಜ್ಯಗಳಲ್ಲಿ ಕಾರ್ಯಾಚರಿಸುತ್ತಿರುವ...
- Advertisement -
error: Content is protected !!