newsics.com
ವಾಷಿಂಗ್ಟನ್: 2016ರ ಅಮೆರಿಕ ಅಧ್ಯಕ್ಷೀಯ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ನೀಲಿ ಚಿತ್ರ ತಾರೆ ಸ್ಟಾರ್ಮಿ ಡೇನಿಯಲ್ಸ್‌ಗೆ ಅಕ್ರಮವಾಗಿ ಹಣ ಪಾವತಿಸಿದ ಗಂಭೀರ ಆರೋಪ 76 ವರ್ಷದ ಡೊನಾಲ್ಡ್ ಟ್ರಂಪ್ ವಿರುದ್ಧ ಕೇಳಿಬಂದಿದೆ.
ಈ ಕುರಿತು ಮ್ಯಾನ್‌ಹ್ಯಾಟನ್ ಗ್ರ್ಯಾಂಡ್ ಜ್ಯೂರಿ ಟ್ರಂಪ್ ವಿರುದ್ಧ ಇದೀಗ ದೋಷಾರೋಪಣೆ ಸಲ್ಲಿಸಿದ್ದು, ನ್ಯಾಯಾಲಯದ ಮುಂದೆ ಶೀಘ್ರ ಹಾಜರಾಗುವಂತೆ ಡೊನಾಲ್ಡ್ ಟ್ರಂಪ್‌ಗೆ ಸೂಚಿಸಿದೆ.
ತಮ್ಮ ವಿರುದ್ಧದ ಆರೋಪಗಳನ್ನು ತಿರಸ್ಕರಿಸಿರುವ ಡೊನಾಲ್ಡ್ ಟ್ರಂಪ್, ನ್ಯೂಯಾರ್ಕ್ ಗ್ರ್ಯಾಂಡ್ ಜ್ಯೂರಿಯ ತೀರ್ಪನ್ನು ತಮ್ಮ ಅಧ್ಯಕ್ಷೀಯ ಚುನಾವಣಾ ಪ್ರಚಾರದ ತಂತ್ರದ ಭಾಗವಾಗಿ ಬಳಸುತ್ತಿದೆ. ಅಲ್ಲದೇ ಈಗಿನ ಅಧ್ಯಕ್ಷ ಜೋ ಬೈಡನ್ ಈ ತಪ್ಪಿಗಾಗಿ ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಟ್ರಂಪ್ ಈಗ ಬಂಧನದ ಭೀತಿಯನ್ನು ಎದುರಿಸುತ್ತಿದ್ದು, ಮಂಗಳವಾರ ನ್ಯಾಯಾಲಯಕ್ಕೆ ಶರಣಾಗುವ ಸಾಧ್ಯತೆ ಇದೆ.ಜತೆಗೆಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿರುವ ಮೊದಲ ಅಮೆರಿಕದ ಮಾಜಿ ಅಧ್ಯಕ್ಷ ಎಂಬ ಅಪಖ್ಯಾತಿಗೆ ಒಳಗಾಗಿದ್ದಾರೆ.