Monday, April 12, 2021

ಟ್ರಂಪ್ ಪತ್ನಿ ಪ್ರತಿಮೆಗೆ ಬೆಂಕಿ

ವಾಷಿಂಗ್ಟನ್: ಅಮೆರಿಕದ ಪ್ರಥಮ ಮಹಿಳೆ ಮೆಲನಿಯಾ ಟ್ರಂಪ್ ಅವರ ಮರದ ಪ್ರತಿಮೆಗೆ ಬೆಂಕಿ ಹಚ್ಚಿ ವಿರೂಪಗೊಳಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮೆಲನಿಯಾ ಟ್ರಂಪ್ ಅವರ ಹುಟ್ಟೂರು ಸ್ಲೊವೇನಿಯಾದಲ್ಲಿ ಈ ಪ್ರತಿಮೆ ನಿರ್ಮಿಸಲಾಗಿತ್ತು. ಅಮೆರಿಕದ ಸ್ವಾತಂತ್ರ್ಯದ ದಿನಾಚರಣೆಯಂದೇ (ಜು.4) ಪ್ರತಿಮೆಗೆ ಬೆಂಕಿ ಹಚ್ಚಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪೊಲೀಸರು ಮಾಹಿತಿ ನೀಡಿದ ಕೂಡಲೇ ವಿರೂಪಗೊಂಡಿದ್ದ ಪ್ರತಿಮೆಯನ್ನು ತೆರವುಗೊಳಿಸಲಾಗಿದೆ ಎಂದು ಪ್ರತಿಮೆಯನ್ನು ನಿರ್ಮಿಸಿರುವ ಜರ್ಮನಿ ಮೂಲದ ಅಮೆರಿಕ ಕಲಾವಿದ ಬ್ರಾಡ್ ಡೌನಿ ತಿಳಿಸಿದ್ದಾರೆ.
“ಪ್ರತಿಮೆಯನ್ನು ಯಾಕೆ ವಿರೂಪಗೊಳಿಸಿದರು ಎಂದು ಕೇಳಬಯಸುತ್ತೇನೆ. ಅಮೆರಿಕದಲ್ಲಿ ಜನಾಂಗೀಯ ದ್ವೇಷದ ಕಿಡಿಯನ್ನು ಶಮನಗೊಳಿಸಲು ತ್ವರಿತವಾಗಿ ಮಾತುಕತೆ ನಡೆಸಲು ಇದು ಸಕಾಲ. ವಲಸಿಗರ ಪ್ರತಿನಿಧಿಯಾಗಿರುವ ಮೆಲನಿಯಾ ಟ್ರಂಪ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿರುವುದು ಸರಿಯಲ್ಲ” ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!