Tuesday, April 13, 2021

ವಿಶ್ವದ ಅತಿ ಹಿರಿಯ ವ್ಯಕ್ತಿ ಬಾಬ್ ವೇಯ್ಟನ್ ನಿಧನ

ಲಂಡನ್: ಕ್ಯಾನ್ಸರ್’ನಿಂದ ಬಳಲುತ್ತಿದ್ದ ವಿಶ್ವದ ಅತಿ ಹಿರಿಯ ವ್ಯಕ್ತಿ ಎನಿಸಿದ್ದ ಬಾಬ್ ವೇಯ್ಟನ್ (112) ಇಂಗ್ಲೆಂಡ್’ನಲ್ಲಿ ಕೊನೆಯುಸಿರೆಳೆದರು.
ಗಿನ್ನೆಸ್ ದಾಖಲೆಗಳ ಪ್ರಕಾರ, ಬ್ರಿಟನ್’ನಲ್ಲಿ ನೆಲೆಸಿದ್ದ ಬಾಬ್ ವೇಯ್ಟನ್ ಮನೆಯಲ್ಲಿ ಮಲಗಿದ್ದ ವೇಳೆಯಲ್ಲೆ ಮೃತಪಟ್ಟಿದ್ದಾರೆ.
ಜಪಾನ್ ದೇಶದ ಚಿಟೆಟ್ಸ್‌ಉ ವಟನಾಬೆ ನಿಧನದ ನಂತರ ಫೆಬ್ರವರಿಯಲ್ಲಿ ಬಾಬ್ ವೇಯ್ಟನ್ ಅವರನ್ನು ವಿಶ್ವದ ಹಿರಿಯ ವ್ಯಕ್ತಿ ಎಂದು ಗಿನ್ನಿಸ್ ದಾಖಲೆಗೆ ಸೇರಿಸಲಾಗಿತ್ತು. 1908 ಮಾರ್ಚ್ 29 ರಂದು ಉತ್ತರ ಇಂಗ್ಲೆಂಡ್ ಯಾರ್ಕ್ ಶೈರ್ ನಲ್ಲಿ ಜನಿಸಿದ ಅವರಿಗೆ ಮೂವರು ಮಕ್ಕಳು, 10 ಮೊಮ್ಮಕ್ಕಳು, 25 ಮರಿಮೊಮ್ಮಕ್ಕಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!