Saturday, April 17, 2021

ಪತ್ರಕರ್ತೆಯ ಜತೆ ವಾಗ್ವಾದ: ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಟ್ರಂಪ್

ವಾಷಿಂಗ್ಟ್ ನ್:   ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಪತ್ರಿಕಾಗೋಷ್ಟಿಯಲ್ಲಿ ಸಂಯಮ ಕಳೆದುಕೊಂಡಿದ್ದಾರೆ. ಪ್ರಶ್ನೆಯೊಂದಕ್ಕೆ ಸಿಟ್ಟಾದ ಟ್ರಂಪ್ ಪತ್ರಿಕಾಗೋಷ್ಠಿ ಮೊಟಕುಗೊಳಿಸಿ ಅಲ್ಲಿಂದ ತೆರಳಿದ್ದಾರೆ.  ಕೊರೋನಾ ಕುರಿತಾದ ಪತ್ರಿಕಾಗೋಷ್ಠಿಯಲ್ಲಿ ಈ ಘಟನೆ ಸಂಭವಿಸಿದೆ.ಸಿಬಿಎಸ್ ಸುದ್ದಿ ಸಂಸ್ಥೆಯ ವೆಜಿಯಾ  ಜಿಯೋಂಗ್ ಕೇಳಿದ  ಪ್ರಶ್ನೆ  ಟ್ರಂಪ್ ಅವರಿಗೆ ಇಷ್ಟವಾಗಲಿಲ್ಲ. ಅಮೆರಿಕದಲ್ಲಿ ದಿನ ನಿತ್ಯ ಸಾವಿರಾರು ಮಂದಿ ಕೊರೋನಾದಿಂದ ಸಾಯುತ್ತಿದ್ದಾರೆ. ಹೀಗಿರುವಾಗ ಕೊರೋನಾ ಪರೀಕ್ಷೆಯಲ್ಲಿ ಅಮೆರಿಕ ಮುಂದಿದೆ ಎಂಬ ವಾದ ಮಂಡಿಸುತ್ತೀರಿ.. ಯಾಕೆ ಈ ಸ್ಪರ್ಧೆಯ ಮಾತು ಎಂದು ವೆಜಿಯಾ  ಪ್ರಶ್ನಿಸಿದರು. ಇದಕ್ಕೆ ಕೆರಳಿದ ಟ್ರಂಪ್ ಈ  ಪ್ರಶ್ನೆಯನ್ನು ಚೀನಾಕ್ಕೆ ಕೇಳಿ ಎಂದು ಪ್ರತ್ಯುತ್ತರ ನೀಡಿದರು.  ವೆಜಿಯಾ ಮೂಲತ:  ಚೀನಾದವರಾಗಿದ್ದಾರೆ. ಈ  ಪ್ರಶ್ನೆಗೂ ನನ್ನ ಮೂಲಕ್ಕೆ  ಸಂಬಂಧ ಕಲ್ಪ್ಸಿಸಬೇಡಿ  ಎಂದು ಹೇಳಿದಾಗ ಈ ತರದ ಕೀಟಲೆ ಪ್ರಶ್ನೆ ಯಾರು ಕೇಳಿದರೂ ಕೂಡ ಇದೇ ಉತ್ತರ ನೀಡುತ್ತಿದ್ದೆ ಎಂದು ಟ್ರಂಪ್ ಪ್ರತಿಕ್ರಿಯಿಸಿದರು. ಬಳಿಕ ಇನ್ನೊಬ್ಬ ವರದಿಗಾರ್ತಿ  ಪ್ರಶ್ನೆಗೆ ಉತ್ತರಿಸಲು ಸಿದ್ದರಾದ ಟ್ರಂಪ್ ತಕ್ಷಣವೇ ಪತ್ರಿಕಾಗೋಷ್ಟಿ ಮೊಟಕುಗೊಳಿಸಿ ಅಲ್ಲಿಂದ ತೆರಳಿದರು.

ಮತ್ತಷ್ಟು ಸುದ್ದಿಗಳು

Latest News

ತ್ರಿಬಲ್ ಟಿ ಸೂತ್ರ ಪಾಲನೆಗೆ ಪ್ರಧಾನಿ ಮೋದಿ ಸಲಹೆ

newsics.com ನವದೆಹಲಿ: ಇಂದಿಲ್ಲಿ (ಏ.17) ನಡೆದ ಕೊರೋನಾ ಹಿನ್ನೆಲೆಯ ಮಹತ್ವದ ಸಭೆಯ ಬಳಿಕ ಪ್ರಧಾನಿ ಮೋದಿಯವರು ತ್ರಿಬಲ್ ಟಿ ಸೂತ್ರ ಅನುಷ್ಠಾನಗೊಳಿಸುವಂತೆ ಸೂಚಿಸಿದ್ದಾರೆ. ದೇಶದಲ್ಲಿ ಅತಿಯಾಗಿ ಹೆಚ್ಚುತ್ತಿರುವ ಕೊರೋನಾ...

ಆಮ್ಲಜನಕ‌ ಕೊರತೆ: ಐಸಿಯುನಲ್ಲಿದ್ದ ಮೂವರು ಕೊರೋನಾ ಸೋಂಕಿತರು ಸಾವು

newsics.com ಲಖನೌ (ಉತ್ತರ ಪ್ರದೇಶ): ಆಮ್ಲಜನಕದ ಕೊರತೆಯಿಂದಾಗಿ ಮೂವರು ಕೋವಿಡ್ ರೋಗಿಗಳು ಶನಿವಾರ ಸಾವನ್ನಪ್ಪಿದ್ದಾರೆ. ಮೃತರು ಗೋಮ್ಟಿನಗರದ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸಿಯುಗೆ ದಾಖಲಾಗಿದ್ದರು. ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು,...

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ ಮಾರಾಟದ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ...
- Advertisement -
error: Content is protected !!