Saturday, November 27, 2021

ಕೊರೋನಾ ಗುಣಮುಕ್ತ ಲಸಿಕೆ ಶೀಘ್ರ ಎಂದ ಟ್ರಂಪ್

Follow Us

ವಾಷಿಂಗ್ಟ್ ನ್: ಮಾರಕ ಕೊರೋನಾ ತಡೆಗಟ್ಟುವ ನಿಟ್ಟಿನಲ್ಲಿ ಲಸಿಕೆ ಅಭಿವೃದ್ದಿಪಡಿಸುವ ಕಾರ್ಯ ನಿರ್ಣಾಯಕ ಹಂತ ತಲುಪಿದೆ. ಈ  ಪ್ರಯತ್ನದಲ್ಲಿ ಸಾಕಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.  ಎರಡು ಔಷಧ ಕಂಪನಿಗಳು ಲಸಿಕೆ ಅಭಿವೃದ್ದಿಪಡಿಸಲು ಒಪ್ಪಿಗೆ ಸೂಚಿಸಿವೆ. ಅಲ್ಲದೆ ಹತ್ತು ಚಿಕಿತ್ಸಕ ಏಜೆಂಟ್ ಗಳು ಇದರ ಪ್ರಯೋಗದಲ್ಲಿ ನಿರತರಾಗಿದ್ದಾರೆ ಎಂದು ಟ್ರಂಪ್ ಹೇಳಿದ್ದಾರೆ.  ಈ ಬೆಳವಣಿಗೆ  ಕುರಿತಂತೆ ಪ್ರತಿಕ್ರಿಯಿಸಿರುವ ವಿಶ್ವ ಆರೋಗ್ಯ ಸಂಸ್ಥೆ  70ಕ್ಕೂ ಹೆಚ್ಚು ರಾಷ್ಟ್ರಗಳು ಲಸಿಕೆ ಅಭಿವೃದ್ದಿಪಡಿಸುವಲ್ಲಿ ಕೈ ಜೋಡಿಸಿವೆ  ಎಂದು ಹೇಳಿದೆ. 20 ಸಂಸ್ಥೆಗಳು ಈ ಕುರಿತ ಸಂಶೋಧನೆಯಲ್ಲಿ ನಿರತವಾಗಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

Latest News

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ....

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...
- Advertisement -
error: Content is protected !!