Wednesday, October 5, 2022

ಚುನಾವಣಾ ಫಲಿತಾಂಶ ಪ್ರಶ್ನಿಸಿ ಮಿಶಿಗನ್ ಕೋರ್ಟ್’ನಲ್ಲಿ ಟ್ರಂಪ್ ಮೊಕದ್ದಮೆ

Follow Us

newsics.com
ವಾಷಿಂಗ್ಟನ್: ಚುನಾವಣಾ ಫಲಿತಾಂಶವನ್ನು ಪ್ರಶ್ನಿಸಿ ಅಮೆರಿಕದ ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಮಿಶಿಗನ್ ನ್ಯಾಯಾಲಯವೊಂದರಲ್ಲಿ ಮೊಕದ್ದಮೆ ದಾಖಲಿಸಿದ್ದಾರೆ.
ಆದರೆ, ಇದೇ ವೇಳೆ ಅಮೆರಿಕದ ನಿಯೋಜಿತ ಅಧ್ಯಕ್ಷ ಜೋ ಬೈಡನ್ ಅಧಿಕಾರ ಸ್ವೀಕಾರಕ್ಕೆ ಸಿದ್ಧತೆ ಆರಂಭಿಸಿದ್ದಾರೆ. ಮಿಶಿಗನ್ ರಾಜ್ಯವು ನವೆಂಬರ್ 3ರ ಚುನಾವಣಾ ಫಲಿತಾಂಶವನ್ನು ಪ್ರಮಾಣೀಕರಿಸಬಾರದು ಎಂದು ಕೋರಿ ರಿಪಬ್ಲಿಕನ್ ಪಕ್ಷಕ್ಕೆ ಸೇರಿದ ಟ್ರಂಪ್‌ರ ಕಾನೂನು ತಂಡವು ಮಿಶಿಗನ್ ಫೆಡರಲ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದೆ. ನವೆಂಬರ್ 3ರಂದು ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಮಿಶಿಗನ್ ರಾಜ್ಯವನ್ನು ಬೈಡನ್ ಗೆದ್ದಿದ್ದಾರೆ. 2016ರಲ್ಲಿ ನಡೆದ ಚುನಾವಣೆಯಲ್ಲಿ ಈ ರಾಜ್ಯವನ್ನು ಟ್ರಂಪ್ ಗೆದ್ದಿದ್ದರು. ಮಿಶಿಗನ್ ರಾಜ್ಯದಲ್ಲಿ ಟ್ರಂಪ್ ತನ್ನ ಎದುರಾಳಿಗಿಂತ ಸುಮಾರು 1.48 ಲಕ್ಷ, ಅಂದರೆ 2.6 ಶೇಕಡ ಮತಗಳಿಂದ ಹಿಂದಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...
- Advertisement -
error: Content is protected !!