ವಾಷಿಂಗ್ಟನ್: ಅಧಿಕಾರ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ವಾಗ್ದಂಡನೆ ಭೀತಿ ಎದುರಿಸುತ್ತಿದ್ದ ಅಮೆರಿಕ ಅಧ್ಯಕ್ಷ ಟ್ರಂಪ್ ಅದರಿಂದ ಪಾರಾಗಿದ್ದಾರೆ. ಇದರೊಂದಿಗೆ ಪ್ರತೀಕಾರದ ಕ್ರಮಕ್ಕೆ ಕೂಡ ಮುಂದಾಗಿದ್ದಾರೆ. ತಮ್ಮ ವಿರುದ್ಧ ಸಾಕ್ಷ್ಯ ಹೇಳಿದ ಇಬ್ಬರು ಅಧಿಕಾರಿಗಳನ್ನು ವಜಾಗೊಳಿಸಿದ್ದಾರೆ. ಐರೋಪ್ಯ ಒಕ್ಕೂಟದಲ್ಲಿ ಅಮೆರಿಕದ ಪ್ರತಿನಿಧಿಯಾಗಿದ್ದ ಗೋರ್ಡನ್ ಸೋಡ್ಲಾಂಡ್ ಕೂಡ ಇದರಲ್ಲಿ ಸೇರಿದ್ದಾರೆ. ವಾಗ್ದಂಡನೆ ಪ್ರಕ್ರಿಯೆ ಸಂದರ್ಭದಲ್ಲಿ ಸೋಡ್ಲಾಂಡ್ ಟ್ರಂಪ್ ವಿರುದ್ಧ ಹೇಳಿಕೆ ನೀಡಿದ್ದರು ಎಂದು ಆರೋಪಿಸಲಾಗಿದೆ.