Monday, October 3, 2022

ಅಮೆರಿಕದಲ್ಲಿ ಒಂದೇ ದಿನ ಎರಡು ಲಕ್ಷ ಮಂದಿಗೆ ಕೊರೋನಾ ಸೋಂಕು

Follow Us

Newsics.com

ವಾಷಿಂಗ್ಟನ್: ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ಕೊನೆಗೊಂಡರೂ ಕೊರೋನಾದ ಅಬ್ಬರ ಕಡಿಮೆಯಾಗಿಲ್ಲ. ಕಳೆದ 24 ಗಂಟೆ ಅವಧಿಯಲ್ಲಿ ಎರಡು ಲಕ್ಷಕ್ಕಿಂತ ಹೆಚ್ಚು ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಅಮೆರಿಕದಲ್ಲಿ ಹೊಸದಾಗಿ 2, 01, 961 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.

ಕಳೆದ 24 ಗಂಟೆ ಅವಧಿಯಲ್ಲಿ ಅಮೆರಿಕದಲ್ಲಿ  ಕೊರೋನಾ 1535 ಮಂದಿಯನ್ನು ಬಲಿಪಡೆದುಕೊಂಡಿದೆ. ಕೊರೋನಾಕ್ಕೆ ಅಮೆರಿದಲ್ಲಿ ಬಲಿಯಾದವರ ಸಂಖ್ಯೆ  2, 39, 588ಕ್ಕೆ ತಲುಪಿದೆ.

ಅಮೆರಿಕದಲ್ಲಿ ಕೊರೋನಾ ನಿಯಂತ್ರಿಸಲು ವಿಫಲವಾಗಿರುವುದೇ ಡೊನಾಲ್ಡ್ ಟ್ರಂಪ್ ಸೋಲಿಗೆ ಪ್ರಮುಖ ಕಾರಣ  ಎಂದು ವಿಶ್ಲೇಷಿಸಲಾಗುತ್ತಿದೆ. ಅಧ್ಯಕ್ಷೀಯ ಚುನಾವಣೆಯ ಮೊದಲು ಅಮೆರಿಕದ ನಾಗರಿಕರಿಗೆ ಕೊರೋನಾ ತಡೆ ಲಸಿಕೆ ಪೂರೈಸುವುದಾಗಿ ಟ್ರಂಪ್ ಭರವಸೆ ನೀಡಿದ್ದರು. ಈ ಮಾತು ಉಳಿಸಿಕೊಳ್ಳಲು ಅವರಿಂದ ಸಾಧ್ಯವಾಗಲಿಲ್ಲ.

ಇದೀಗ ನಿಯೋಜಿತ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜೋ  ಬೈಡನ್ , ಕೊರೋನಾ ನಿಯಂತ್ರಣಕ್ಕೆ ಕಾರ್ಯಪಡೆ ರಚಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!