Tuesday, April 13, 2021

ಅಂಕಿತ ಹಾಕದ ಯುಕೆ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್, ಮಲ್ಯ ಹಸ್ತಾಂತರ ಮತ್ತಷ್ಟು ವಿಳಂಬ

ಲಂಡನ್: ಸಿಬಿಐ ಹಾಗೂ ಇಡಿ ಅಧಿಕಾರಿಗಳು ಅಂದುಕೊಂಡಂತೆ ಎಲ್ಲವೂ ಆಗಿದ್ದರೆ ಗುರುವಾರ ದೇಶಭ್ರಷ್ಟ ಆರ್ಥಿಕ ಅಪರಾಧಿ ಎನಿಸಿಕೊಂಡಿರುವ ಉದ್ಯಮಿ ವಿಜಯ್ ಮಲ್ಯ ಅವರನ್ನು ಮುಂಬೈಗೆ ಕರೆತರಬೇಕಿತ್ತು. ಆದರೆ, ಯುಕೆ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್ ಅವರಿಂದಾಗಿ ಮಲ್ಯರನ್ನು ಭಾರತಕ್ಕೆ ಕರೆತರುವ ಪ್ರಕ್ರಿಯೆ ವಿಳಂಬವಾಗಿದೆ.
ಇಂಗ್ಲೆಂಡಿನಿಂದ ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ಮೇ 14ರಂದು ವಜಾಗೊಂಡಿದ್ದು, ನಂತರ ಸುಪ್ರೀಂ ಕೋರ್ಟ್’ನಲ್ಲಿ ಮರು ಅರ್ಜಿ ಹಾಕುವ ಅವಕಾಶವನ್ನು ಮಲ್ಯ ಕಳೆದುಕೊಂಡಿದ್ದರು. ಹೀಗಾಗಿ, ಮಲ್ಯರನ್ನು ಶೀಘ್ರ ಭಾರತಕ್ಕೆ ಹಸ್ತಾಂತರಿಸಬಹುದು ಎಂದು ನಿರೀಕ್ಷಿಸಲಾಗಿತ್ತು. ಸಿಬಿಐ ಕೂಡ ಮಲ್ಯರನ್ನು ಭಾರತಕ್ಕೆ ಕರೆತರುವ ಪ್ರಕ್ರಿಯೆ ಆರಂಭವಾಗಿದೆ ಎಂದು ಹೇಳಿತ್ತು.
ಆದರೆ, ಹಸ್ತಾಂತರ ಪ್ರಕ್ರಿಯೆ ಕುರಿತಂತೆ ಯುಕೆ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್ ಅವರು ಅಂತಿಮ ನಿರ್ಧಾರ ಕೈಗೊಳ್ಳಬೇಕಾಗಿದೆ. ಪ್ರೀತಿ ಅವರು ಹಸ್ತಾಂತರ ಪ್ರಕ್ರಿಯೆಗೆ ಒಪ್ಪಿಗೆ ಸೂಚಿಸಿ ಇನ್ನೂ ಅಂತಿಮ ಅಂಕಿತ ಹಾಕಿಲ್ಲವಾದ ಕಾರಣ, ಮಲ್ಯರನ್ನು ಸದ್ಯಕ್ಕೆ ಭಾರತಕ್ಕೆ ಕರೆತರುವ ಸಾಧ್ಯತೆ ಇಲ್ಲ ಎಂದು ತಿಳಿದುಬಂದಿದೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!